ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ : ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಿಎಂ ಬಿಎಸ್​ವೈ, ಶಿಕ್ಷಣ ಸಚಿವ ಸುರೇಶ್​ ಕುಮಾರ್

10:13 AM, Wednesday, March 4th, 2020
Share
1 Star2 Stars3 Stars4 Stars5 Stars
(No Ratings Yet)
Loading...

PUC-Exam

ಬೆಂಗಳೂರು : 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಪ್ರಾರಂಭವಾಗಲಿದ್ದು, ಮಾರ್ಚ್ 23ರವರೆಗೆ ನಡೆಯಲಿದೆ. ಈ ಬಾರಿ ಪರೀಕ್ಷೆ ವೇಳೆ ಯಾವುದೇ ಗೊಂದಲ, ಎಡವಟ್ಟು ಉಂಟಾಗದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜೊತೆಗೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ ಕುಮಾರ ಅವರು ಧೈರ್ಯದ ಜೊತೆಗೆ ಶುಭಾಶಯ ಕೋರಿದ್ದಾರೆ.

ಪಿಯುಸಿ ಪರೀಕ್ಷೆ ಸಂಬಂಧ ಮಾತನಾಡಿರುವ ಸುರೇಶ್ ಕುಮಾರ ಅವರು, ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ವದಂತಿಗಳಿಗೆ ಕಿವಿ ಕೊಡಬಾರದು ಎಂದು ವಿದ್ಯಾರ್ಥಿಗಳು, ಪೋಷಕರಿಗೆ ಮನವಿ ಮಾಡಿದ್ದಾರೆ. ಜೊತೆಗೆ ವದಂತಿ ಹರಡುವವರ ವಿರುದ್ದವೂ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ರೀತಿಯ ಸಮಸ್ಯೆ ಆಗದ ರೀತಿಯ ಕ್ರಮ ವಹಿಸಲಾಗಿದೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೆ ಮುಕ್ತ ವಾತಾವರಣದಲ್ಲಿ ನಿಶ್ಚಿಂತೆಯಿಂದ, ಆತ್ಮವಿಶ್ಚಾಸ ದಿಂದ ಪರೀಕ್ಷೆ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.

ಮಾರ್ಚ್ 4ರಿಂದ 23ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಬಾರಿ 1016 ಕೇಂದ್ರಗಳಲ್ಲಿ 6,80,674 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ನಿಯಂತ್ರಣ ಘಟಕಗಳನ್ನು ಇರಿಸಲಾಗಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ. 2,16,930 ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ, 2,61,674 ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಮತ್ತು 2,01,445 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಈ ಬಾರಿ 3,41,618 ಹುಡುಗರು ಮತ್ತು 3,38431 ಹುಡುಗಿಯರು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 39 ವಿಷಯಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English