ಮೈಸೂರು : ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

12:46 PM, Wednesday, March 4th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

chirate

ಮೈಸೂರು : ಆಗಾಗ ಊರಿಗೆ ನುಗ್ಗಿ ನಾಯಿಗಳನ್ನು ಹೊತ್ತೊಯ್ದು ಜನರಿಗೆ ಭೀತಿ ಹುಟ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ.

ತಿ.ನರಸೀಪುರ ತಾಲೂಕಿನ ತುಂಬಲ ಗ್ರಾಮದ ಸಮೀಪದ ಬಟ್ಟಳಿಗೆ ಹುಂಡಿ ಗ್ರಾಮದಲ್ಲಿ ಮಹದೇವ್ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ 2 ವರ್ಷದ ಗಂಡು ಚಿರತೆ ಸೆರೆಯಾಗಿದೆ.

ನಿನ್ನೆಯಷ್ಟೆ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಇಂದು ಸುಮಾರು 2 ವರ್ಷದ ಚಿರತೆ ಸೆರೆಯಾಗಿದೆ. ಹಲವು ದಿನಗಳಿಂದ ಬಟ್ಟಳಿಗೆ ಹುಂಡಿ ಗ್ರಾಮದ ಜನರಿಗೆ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದ್ದರು.

ಕೆಲ ತಿಂಗಳುಗಳಿಂದ ಬೋನಿಗೆ ಬಿದ್ದಿರುವ 6ನೇ ಚಿರತೆ ಇದಾಗಿದೆ. ಸ್ಥಳಕ್ಕೆ ಆಗಮಿಸಿದ ಡಿಎಫ್ ಆರ್ ಒ ಮಂಜುನಾಥ್ ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಚಿರತೆಯನ್ನ ಸ್ಥಳಾಂತರಿಸಿದ್ದಾರೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English