ಉಡುಪಿ : ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ

10:21 AM, Thursday, March 5th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

charan-shetty

ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಕಾಲೇಜಿನ ಪ್ರಾಧ್ಯಾಪಕರು ನೀಡಿದ ಮಾನಸಿಕ ಕಿರುಕುಳಕ್ಕೆ ಬೆಸತ್ತು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಕಾಲೇಜಿನವರ ಮೇಲೆ ಆರೋಪವಿದೆ.

ಬ್ರಹ್ಮಾವರ ಮಂದಾರ್ತಿ ಸಮೀಪದ ಮೈರಕೊಮೆ ನಿವಾಸಿ ಚರಣ್ ಶೆಟ್ಟಿ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹೆಬ್ರಿ ಕಾಲೇಜಿನಲ್ಲಿ ಪ್ರಥಮ ಬಿಕಾಂ ವ್ಯಾಸಂಗ ಮಾಡುತ್ತಿದ್ದ. ಇತ್ತೀಚೆಗೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಂದು ನಡೆದ ಘಟನೆಗೆ ಶಿಕ್ಷಕರಿಂದ ನಿರಂತರ ಮಾನಸಿಕ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ಗೆಳೆಯನಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ. ಈ ಬಗೆಗಿನ ಆಡಿಯೋ ಕ್ಲಿಪ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮನೆಯ ಸಮೀಪದ ಹಾಡಿಯಲ್ಲಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಚರಣ್ ಶವ ಪತ್ತೆಯಾಗಿದ್ದು, ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.

 

1 ಪ್ರತಿಕ್ರಿಯೆ - ಶೀರ್ಷಿಕೆ - ಉಡುಪಿ : ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ

  1. Kavitha, Shiroor%20in%20kundapura%20😎

    yavde student agali suside annud erbaddu Ade avr challenge agi togondu avr munde Valle ritinda life lead madbhadu .Nav yar bagge nu tale kedsko bardu challenge agi erbek . Games nalli innobna bitkodll. Nave gell bek anth eruva janaa …… Avr life na yke bitkodtare ….. Life is most important in world. …. …… Ks…..

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English