ಬೆಂಗಳೂರು : ಟೆಕ್ಕಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೇರಳ ಮೂಲಕ ನಾಲ್ವರು ಆರೋಪಿಗಳು ಬೆಂಗಳೂರಿನ ಟೆಕ್ಕಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಆಂಧ್ರ ಪ್ರದೇಶದಿಂದ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದರು.
ಈ ಕುರಿತಾದ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕೇರಳ ಮೂಲದ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಹರಿಕೃಷ್ಣನ್, ಮುಹಮ್ಮದ್ ಫಿಬಿನ್, ಹರಿ ಶಂಕರ್, ರಾಹುಲ್ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳಿಂದ ಸುಮಾರು 50 ಲಕ್ಷ ಮೌಲ್ಯದ ಏಳು ಕೆಜೆ ಗಾಂಜಾ, 70 ಎಸ್‌ಎಸ್‌ಡಿ, 12 ಕೆಜಿ 300 ಗ್ರಾಂ ಹ್ಯಾಶಿಶ್ ಆಯಿಲ್, 170 ಗ್ರಾಂ ಹ್ಯಾಶಿಶ್ ಉಂಡೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಟೆಕ್ಕಿಗಳನ್ನು ಗುರಿಯಾಗಿಸಿಕೊಂಡು ಬೃಹತ್ ಮಾದಕ ವಸ್ತುಗಳ ಮಾರಾಟ ಜಾಲ ಕಾರ್ಯಾಚರಣೆ ನಡೆಸುತ್ತಿದೆ.
Click this button or press Ctrl+G to toggle between Kannada and English