ಹೆರಿಗೆ ವೇಳೆ ಅಧಿಕ ರಕ್ತಸ್ರಾವದಿಂದ ಕಾರ್ಕಳ ಮಹಿಳಾ ಹೆಡ್‌ಕಾನ್‌ಸ್ಟೆಬಲ್‌ ಮೃತ್ಯು

12:47 PM, Friday, March 6th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Shyamala

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್‌ ಠಾಣೆಯ ಮಹಿಳಾ ಹೆಡ್‌ ಕಾನ್‌ಸ್ಟೆಬಲ್‌ ಶ್ಯಾಮಲಾ (37) ಅವರು ಹೆರಿಗೆ ಸಂದರ್ಭ ಅಧಿಕ ರಕ್ತಸ್ರಾವದಿಂದಾಗಿ ಗುರುವಾರ ಸಾವನ್ನಪ್ಪಿದ್ದಾರೆ.

ಮಾ. 3ರಂದು ಕಾರ್ಕಳದ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಶ್ಯಾಮಲಾ ಅವರಿಗೆ ಗುರುವಾರ ಮಧ್ಯಾಹ್ನ ಹೆರಿಗೆಯಾಗಿದ್ದು ಬಳಿಕ ಅಧಿಕ ರಕ್ತಸ್ರಾವವಾಗುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶ್ಯಾಮಲಾ ಕೊನೆಯುಸಿರೆಳೆದರು.

ಇವರ ಪತಿ ಗಿರಿಧರ್‌ ಪೈ ಅವರು ಕೂಡ ಕಾರ್ಕಳ ನಗರ ಠಾಣೆಯಲ್ಲಿ ಪೊಲೀಸ್‌ ಸಿಬಂದಿಯಾಗಿದ್ದಾರೆ.

 

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English