- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಆಳ್ವಾಸ್‌ನ ವಿಭಾ, ವಿವೇಕಾನಂದದ ಶ್ರೀ ಕಾಂತ್‌ಗೆ `ಮಾಮ್ ಇನ್‌ಸ್ಪೈರ್ ಪ್ರಶಸ್ತಿ’ 

alvas [1]
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿ ಸಂಘಟನೆ `ಮೀಡಿಯ ಅಲೂಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ'(ಮಾಮ್) ವತಿಯಿಂದ ನೀಡಲಾಗುವ 2018-19ನೇ ಸಾಲಿನ ಮಾಮ್ ಇನ್‌ಸ್ಪೈರ್ ಪ್ರಶಸ್ತಿಗೆ ಇಬ್ಬರು ಪ್ರತಿಭಾವಂತರು ಆಯ್ಕೆಯಾಗಿದ್ದಾರೆ.

ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ವಿಭಾ ಡೋಂಗ್ರೆ (ಪ್ರಥಮ), ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯೂನಿಕೇಷನ್‌ನ ವಿದ್ಯಾರ್ಥಿನಿ ಚೇತನಾ ನಾಯಕ್ ಕೆ. (ದ್ವಿತೀಯ) ಆಯ್ಕೆಯಾಗಿದ್ದಾರೆ.

ಪದವಿ ವಿಭಾಗದಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಶ್ರೀಕಾಂತ್ ಪಿ. (ಪ್ರಥಮ), ಆಳ್ವಾಸ್ ಕಾಲೇಜಿನ ಸೋನಿಯ ಎಸ್. (ದ್ವಿತೀಯ) ಸ್ಥಾನ ಗಳಿಸಿದ್ದಾರೆ.

ಬರಹ, ಮಾಧ್ಯಮ ಚಟುವಟಿಕೆಗಳಲ್ಲಿ ಸಕ್ರಿಯತೆ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ತೊಡಗಿಕೊಳ್ಳುವಿಕೆಯನ್ನು ಆಧರಿಸಿ ಈ ಪ್ರಶಸ್ತಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಗಾಗಿ ಕಳೆದ ವರ್ಷ ಅರ್ಜಿ ಆಹ್ವಾನಿಸಲಾಗಿತ್ತು. ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಅವರು ಲೇಖನ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಅಂತಿಮ ಮೌಲ್ಯಮಾಪನ ನಡೆಸಿದ್ದರು. ಇನ್‌ಸ್ಪೈರ್ ಪ್ರಶಸ್ತಿಯು ರೂ.೫ ಸಾವಿರ ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ. ದ್ವಿತೀಯ ಸ್ಥಾನ ಗಳಿಸಿದವರಿಗೆ ರೂ.1500ನಗದು ಹಾಗೂ ಪ್ರಶಸ್ತಿ ಫಲಕ ನೀಡಲಾಗುವುದು.

ಮಾರ್ಚ್ 13ರಂದು ಪ್ರಶಸ್ತಿ ಪ್ರದಾನ
ಮಾಮ್ ಇನ್‌ಸ್ಪೈರ್ ಸ್ಪರ್ಧಾ ವಿಜೇತರಿಗೆ ಮಾ.೧೩ರಂದು ಪೂರ್ವಾಹ್ನ ೧೦ ಗಂಟೆಗೆ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು `ಮಾಮ್’ ಅಧ್ಯಕ್ಷ ಸುರೇಶ್ ಪುದುವೆಟ್ಟು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.