ಬೆಂಗಳೂರು : ಹಳೆ ವಿಡಿಯೋ ಇಟ್ಟುಕೊಂಡು ವಿನಯ್ ಗುರೂಜಿಗೆ ಬೆದರಿಕೆ ಹಾಕುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
ರವಿಕುಮಾರ್, ಮುನಿರಾಜು, ಮನೋಜ್, ಮುರಳಿ, ಸಂತೋಷ್ ಬಂಧಿತರು. ಈ ಐವರು ವಿನಯ್ ಗುರೂಜಿಯ ಹಳೆ ವಿಡಿಯೋ ಇಟ್ಟುಕೊಂಡು, ಯೂಟ್ಯೂಬ್ ನಲ್ಲಿ ಅಪ್‍ಲೋಡ್ ಮಾಡಿ ಬೆದರಿಕೆ ಹಾಕುತ್ತಿದ್ದರು. ಇದೀಗ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇವರು ವಿಡಿಯೋ ಎಡಿಟ್ ಮಾಡಿ, ಯೂಟ್ಯೂಬ್‍ಗೆ ಅಪ್‍ಲೋಡ್ ಮಾಡಿದ್ದರು. ನಂತರ 30 ಲಕ್ಷ ರೂ. ನೀಡುವಂತೆ ವಿನಯ್ ಗುರೂಜಿ ಬಳಿ ಬೇಡಿಕೆ ಇಟ್ಟಿದ್ದರು. ಅಲ್ಲದೆ ಬೆದರಿಕೆ ಒಡ್ಡಿದ್ದರು. ಹೀಗಾಗಿ ಈ ಕುರಿತು ವಿನಯ್ ಗುರೂಜಿ ಆಪ್ತ ಪ್ರಶಾಂತ್ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
Click this button or press Ctrl+G to toggle between Kannada and English