ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಎರಡು ದಿನಗಳ ಕಾಲ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನ ದಲ್ಲಿ ನಡೆಯುತ್ತಿರುವ 35ನೇ ಸಮ್ಮೇಳನಕ್ಕೆ ಚೆಂಡೆ, ವಾದ್ಯ ಘೋಷದೊಂದಿಗೆ ಶನಿವಾರದ ಎಲ್ಲ ಪತ್ರಿಕೆಗಳು ಹಾಗೂ ಟಿವಿ ಮಾಧ್ಯಮಗಳ ಲೋಗೋಗಳನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮೂಲಕ ತಂದು ವೇದಿಕೆಯ ಮುಂಬಾಗದಲ್ಲಿರಿಸಿ, ಆ ಮೂಲಕ ಸಮ್ಮೇಳನದ ಮಹತ್ವವನ್ನು ತಿಳಿಸಲಾಯಿತು.
ಬಳಿಕ ವ್ಯಂಗ್ಯ ಚಿತ್ರ ಪ್ರದರ್ಶನವನ್ನು ಉಪ ಮುಖ್ಯ ಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪೋಟೋ ಪ್ರದರ್ಶನ ಮತ್ತು ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು.
ಜನಸಾಮಾನ್ಯರಿಗೆ ರಾಜಕೀಯ ಸುದ್ದಿಗಳಿಂದ ಯಾವುದೇ ಪ್ರಯೋಜನ ವಾಗುವುದಿಲ್ಲ. ಪತ್ರಕರ್ತರು ರಾಜಕೀಯ ಸುದ್ದಿ ಗಳಿಗೆ ಹೆಚ್ಚಿನ ಅದ್ಯತೆ ನೀಡಬಾರದು ಎಂದು ಉಪ ಮುಖ್ಯ ಮಂತ್ರಿ ಡಾ. ಅಶ್ವಥ ನಾರಾಯಣ ಹೇಳಿದರು.
ಜಾಗತೀಕರಣದಿಂದ ಹಣಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ. ಇಂತಹ ವ್ಯವಸ್ಥೆ ಯಲ್ಲಿ ಪತ್ರಕರ್ತರು ವ್ರತ್ತಿಪರ ಮೌಲ್ಯ ವನ್ನು ಕಾಪಾಡಿಕೊಂಡು ವಿಶ್ವಾರ್ಹತೆಯೊಂದಿಗೆ ಕಾರ್ಯ ನಿರ್ವಹಿಸುವುದು ಸವಾಲಿನ ಕಾರ್ಯ ಎಂದವರು ಹೇಳಿದರು.
ಪ್ರಜಾಪ್ರಭುತ್ವ ದ ನಾಲ್ಕನೇ ಅಂಗವಾದ ಪತ್ರಿಕೋದ್ಯಮ ಪರಿಣಾಮಕಾರಿಯಾದದ್ದು. ಇಂತಹ ಪತ್ರಕರ್ತರ ಸಂಘ ಟ್ರಸ್ಟ್ ಕಾಯಿದೆ ಗೊಳಪಟ್ಟರೆ ನೈತಿಕ ಸ್ಥೈರ್ಯ ವನ್ನು ಇನ್ನಷ್ಟು ಬಲಗೊಳಿಸಬಹು ಎಂದವರು ಅಭಿಪ್ರಾಯಿಸಿದರು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಆಯೋಜನೆಗೊಂಡಿರುವ ಎರಡು ದಿನಗಳ ಸಮ್ಮೇಳನ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ನಡೆಯುತ್ತಿದೆ.
ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದ ತರಂಗ ವಾರಪತ್ರಿಕೆಯ ಸಂಪಾದಕಿ ಸಂಧ್ಯಾ ಪೈ ಸಮ್ಮೇಳನದ ಆಶಯ ಭಾಷಣ ಮಾಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲೆಯ ಶಾಸಕರುಗಳಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಯು.ಟಿ.ಖಾದರ್, ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಅದಾನಿ ಗ್ರೂಪ್ ನ ಮುಖ್ಯಸ್ಥರಾದ ಕಿಶೋರ್ ಆಳ್ವ, ಮುಖ್ಯ ಅತಿಥಿಗಳಾಗಿದ್ದರು.
ಈ ಸಂಧರ್ಭದಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು. ಜೊತೆಗೆ ಅವರ ಬಗ್ಗೆ ಲೇಖನವನ್ನು ಬರೆದ ಪತ್ರಕರ್ತರನ್ನೂ ಗೌರವಿಸಲಾಯಿತು.
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಖ್ಯಾತ ಸಂಗೀತ ನಿರ್ದೇಶಕ ಗುರು ಕಿರಣ್, ಏಷ್ಯಾ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಸಂಚಾಲಕ ಎಚ್.ಬಿ.ಮದನಗೌಡ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ, ಉಪಮೇಯರ್ ವೇದಾವತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ದ.ಕ.ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಸಮ್ಮೇಳನ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ರವೀಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Click this button or press Ctrl+G to toggle between Kannada and English