ನವದೆಹಲಿ : ವಿಶ್ವದೆಲ್ಲೆಡೆ ಕೊರೋನಾ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾದೇಶ ಪ್ರವಾಸವನ್ನು ರದ್ದು ಮಾಡಲಾಗಿದೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ.
ಎಲ್ಲವೂ ಅಂದುಕೊಂಡತೆ ನಡೆದಿದ್ದರರೆ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾಜೊತೆಗೆ ದ್ವಿಪಕ್ಷೀಯ ಮಾತುಕತೆಗಾಗಿ ಇಂದು ಬಾಂಗ್ಲಾದೇಶಕ್ಕೆ ತೆರಳಬೇಕಿತ್ತು. ಅಲ್ಲದೆ, ವಿವಿಧ 7 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಮಾರಣಾಂತಿಕ ಕೊರೋನಾ ವೈರಸ್ ಭೀತಿ ಎಲ್ಲೆಡೆ ವ್ಯಾಪಿಸಿರುವ ಕಾರಣ ಮೋದಿ ಅವರ ಆರೋಗ್ಯದ ಹಿತದೃಷ್ಟಿಯಿಂದ ಬಾಂಗ್ಲಾ ಪ್ರವಾಸವನ್ನು ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ.
“ಕೊರೋನಾ ವೈರಸ್ ಭೀತಿಯಿಂದಾಗಿ ಮೋದಿ ಅವರ ಬಾಂಗ್ಲಾ ಪ್ರವಾಸ ಮತ್ತು ವಿವಿಧ ಕಾರ್ಯಕ್ರಮಗಳು ರದ್ದಾಗಿದ್ದರೂ ಸಹ ದ್ವಿಪಕ್ಷೀಯ ಮಾತುಕತೆಯಲ್ಲಿ ಮೋದಿ ಭಾಗವಹಿಸಬಹುದು. ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಜೊತೆ ಎರಡೂ ದೇಶಗಳ ಅಭಿವೃದ್ಧಿ ಕುರಿತು ಚರ್ಚಿಸಬಹುದು ಎಂದು ನಂಬಿದ್ದೇವೆ. ಈ ಕುರಿತು ಭಾರತ ಸರ್ಕಾರದ ಜೊತೆಗೆ ನಾಳೆ ಮಾತುಕತೆ ನಡೆಸಲಾಗುವುದು” ಎಂದು ಬಾಂಗ್ಲಾದೇಶದ ಪ್ರಧಾನಿ ಸಚಿವಾಲಯ ತಿಳಿಸಿದೆ.
Click this button or press Ctrl+G to toggle between Kannada and English