- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಾಜ್ಯದಲ್ಲಿ ಕೊರೊನಾ ಭೀತಿ : ಆರೋಗ್ಯ ಇಲಾಖೆಯಿಂದ ಮಾಹಿತಿ ಪಡೆದ ಸಿಎಂ ಬಿಎಸ್‌ ಯಡಿಯೂರಪ್ಪ

bsy [1]

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮಾಹಿತಿ ಪಡೆದುಕೊಂಡಿದ್ದಾರೆ.

ಕೊರೊನಾ ತಡೆಗಟ್ಟುವಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತಾಗಿ ಬಿಎಸ್‌ವೈ ಮಾಹಿತಿ ಸಂಗ್ರಹ ಮಾಡಿದರು. ಹಿರಿಯ ಅಧಿಕಾರಿಗಳ ಜೊತೆಗೆ ಫೋನ್‌ನಲ್ಲಿ ಮಾತುಕತೆ ನಡೆಸಿದ ಬಿಎಸ್‌ವೈ ಪ್ರತಿಯೊಂದ ವಿವರಗಳನ್ನು ಕಲೆಹಾಕಿದ್ದಾರೆ.

ಈ ವೇಳೆ ಅಧಿಕಾರಿಗಳಿಗೆ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಿಎಂ ಸರ್ಕಾರದ ಕಡೆಯಿಂದ ಎಲ್ಲಾ ರೀತಿಯ ನೆರವುಗಳನ್ನು ನೀಡಲು ಸಿದ್ದ ಎಂದಿದ್ದಾರೆ.

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಐಟಿ ಬಿಟಿ ಕಂಪನಿಗಳು ಇರುವ ಕಡೆಗಳಲ್ಲಿ ಹೆಚ್ಚಿನ ಗಮನ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆಯ ಕ್ರಮಗಳ ಮಾಹಿತಿಯನ್ನು ಪಡೆದುಕೊಂಡರು.

ರಾಜ್ಯದಲ್ಲಿ ಮೊದಲ ಕೊರೊನಾ ವೈರಸ್‌ ಪ್ರಕರಣ ಪತ್ತೆಯಾಗಿದ್ದು ಅಮೆರಿಕಾದಿಂದ ಹಿಂತಿರುಗಿದ ಟೆಕ್ಕಿಯಲ್ಲಿ ಕೊರೊನಾ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿಯನ್ನು ವಹಿಸಿಕೊಂಡಿದೆ.

ದೇಶದಲ್ಲಿ 44 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಮುಂಜಾಗರೂಕತಾ ಕ್ರಮವಾಗಿ ಬೆಂಗಳೂರಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.