ಕಾಪು : ಪಾಂಗಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ 9:45ರ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಉದ್ಯಾವರ ನಿವಾಸಿ, ಪೈಂಟರ್ ಆಗಿ ಕೆಲಸ ಮಾಡುತ್ತಿದ್ದ ಸುಧಾಕರ್(40) ಎಂದು ಗುರುತಿಸಲಾಗಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಅತೀ ವೇಗ ಹಾಗು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿ ಇನ್ನೊಂದು ಬದಿಯ ರಸ್ತೆಗೆ ಪಲ್ಟಿಯಾಗಿ ಇದ್ದಿದ್ದು, ಇದೇ ವೇಳೆ ಉಡುಪಿ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದ ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆಯಿತೆನ್ನಲಾಗಿದೆ. ಬಳಿಕ ಕಾರು ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದಿದೆ. ಸುಧಾಕರ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತ ನಡೆದ ಬಳಿಕ ಚಾಲಕ ಕಾರು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Click this button or press Ctrl+G to toggle between Kannada and English