ಕಲಬುರ್ಗಿ : ಕಲಬುರ್ಗಿ ನಗರದಲ್ಲಿ ವೃದ್ದರೊಬ್ಬರಿಗೆ ಕೊರೋನಾ ವೈರಸ್ ತಗುಲಿರುವ ಶಂಕೆ ವ್ಯಕ್ತವಾಗಿದೆ. ಸೌದಿ ಅರೇಬಿಯಾದಿಂದ ಬಂದಿದ್ದ 75 ವರ್ಷದ ವೃದ್ದನಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಅವರ ಗಂಟಲು ದ್ರವ ಸಂಗ್ರಹಿಸಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ಲ್ಯಾಬ್ ಗೆ ಕಳುಹಿಸಲಾಗಿದ್ದು, ವರದಿಗಾಗಿ ಜಿಲ್ಲಾ ಆರೋಗ್ಯ ಇಲಾಖೆ ಕಾಯುತ್ತಿದೆ.
ಫೆಬ್ರವರಿ 29 ರಂದು ಸೌದಿ ಅರೇಬಿಯಾದಿಂದ ಬಂದಿದ್ದ ವೃದ್ದನಿಗೆ ಮಾರ್ಚ್ 5 ರಂದು ಜ್ವರ, ಶೀತ, ಕೆಮ್ಮು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಕೊರೋನಾ ಲಕ್ಷಣಗಳು ಕಂಡ ಹಿನ್ನೆಲೆಯಲ್ಲಿ ವಿಶೇಷ ಚಿಕಿತ್ಸೆ ನೀಡಿದ ವೈದ್ಯರು, ಕುಟುಂಬಸ್ಥರನ್ನು ಕೂಡಾ ತಪಾಸಣೆ ಮಾಡಿದ್ದಾರೆ. ಚಿಕಿತ್ಸೆ ಪಡೆದುಕೊಂಡಿರುವ ವೃದ್ಧ ಸದ್ಯ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡದಂತೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.
ಇಂದು ಜಿಲ್ಲೆಯಾದ್ಯಂತ ಹೋಳಿ ಹಬ್ಬದ ಸಂಭ್ರಮ. ಆದರೆ ಪ್ರತಿ ವರ್ಷಕ್ಕೆ ಹೋಲಿಸಿ ನೋಡಿದಲ್ಲಿ ಈ ವರ್ಷ ರಂಗುರಂಗಿನ ಹಬ್ಬ ಕಳೆಗುಂದಿದೆ ಎಂದೇ ಹೇಳಬಹುದು. ಅದಕ್ಕೆ ಮುಖ್ಯ ಕಾರಣ ಕೊರೋನಾ ವೈರಸ್ ಭೀತಿ. ಮಕ್ಕಳಿಂದ ಹಿಡಿದು ವಯೋವೃದ್ಧವರೆಗೂ ಹೋಳಿ ಹಬ್ಬದಲ್ಲಿ ಭಾಗಿಯಾಗುತ್ತಿದ್ದರು. ಆದರೆ ಈ ವರ್ಷ ಮಕ್ಕಳು ಪಾಲ್ಗೊಳ್ಳುವಿಕೆ ಮಾತ್ರ ಹೆಚ್ಚಾಗಿ ಕಾಣುತ್ತಿದೆ. ಯಾವುದೇ ರಸ್ತೆಗೆ ಹೋದರೂ ಹಲಗೆ ಸದ್ದು, ಬಾಯಿ ಬಡಿದುಕೊಳ್ಳೋ ಸದ್ದು ಕೇಳುತ್ತಿತ್ತು. ಆದರೆ ಈ ಬಾರಿ ನಗರದ ಪ್ರಮುಖ ಬೀದಿಗಳು ಬಿಕೋ ಎನ್ನುತ್ತಿವೆ.
Click this button or press Ctrl+G to toggle between Kannada and English