- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪಶ್ಚಿಮ ಬಂಗಾಳದ ಬಿಜೆಪಿ ಸಂಸದರ ಜತೆ ಮುಖಾಮುಖಿ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧಾರ

modi [1]

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಬಿಜೆಪಿ ಸಂಸದರ ಜತೆ ಮುಖಾಮುಖಿ ಚರ್ಚೆ ನಡೆಸಿ ರಾಜ್ಯದ ರಾಜಕೀಯ ಚಿತ್ರಣದ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ.

ಮುಂದಿನ ವರ್ಷದ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ರಾಜ್ಯದಲ್ಲಿ ಈಗಿನಿಂದಲೇ ಸಿದ್ದತೆ ಆರಂಭಿಸುವುದು ಮೋದಿ ಅವರ ಉದ್ದೇಶ. ಅದಕ್ಕಾಗಿ ಸಂಸತ್‌ನ ಬಜೆಟ್‌ ಅಧಿವೇಶನದ ಸಂದರ್ಭದಲ್ಲಿಯೇ ರಾಜ್ಯದಿಂದ ಆಯ್ಕೆಯಾಗಿರುವ ಪಕ್ಷದ ಸಂಸದರ ಜತೆ ಚರ್ಚೆ ನಡೆಸಲು ಪ್ರಧಾನಿ ನಿರ್ಧರಿಸಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಆಡಳಿತ ಕೊನೆಗಾಣಿಸಿ ಬಿಜೆಪಿ ಸರಕಾರ ರಚಿಸಬೇಕು ಎನ್ನುವುದು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಗುರಿ. ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿರಾಜ್ಯದ 42 ಕ್ಷೇತ್ರಗಳ ಪೈಕಿ ಬಿಜೆಪಿ 18 ಸ್ಥಾನಗಳನ್ನು ಗೆದ್ದುಕೊಂಡಿದೆ.

”ಸದ್ಯದಲ್ಲಿಯೇ ಮೋದಿಯವರು ರಾಜ್ಯದ ಸಂಸದರ ಜತೆ ಚರ್ಚೆ ನಡೆಸಿ ರಾಜಕೀಯ ಪರಿಸ್ಥಿತಿ ಹಾಗೂ ಕೇಂದ್ರದ ಯೋಜನೆಗಳನ್ನು ರಾಜ್ಯದಲ್ಲಿಎಷ್ಟರಮಟ್ಟಿಗೆ ಅನುಷ್ಠಾನಗೊಳಿಸಲಾಗುತ್ತಿದೆ ಎಂಬ ಮಾಹಿತಿ ಪಡೆಯಲಿದ್ದಾರೆ,” ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ತಿಳಿಸಿದ್ದಾರೆ.