ಎಬಿವಿಪಿ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ

11:24 AM, Wednesday, March 11th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

ABVP

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಮಂಗಳೂರು ವಿಶ್ವವಿದ್ಯಾಲಯ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕಾರ್ಯಗಾರವನ್ನು ದಿನಾಂಕ 08.03.2020 ರಂದು ಅಸೇಗೂಳಿಯ ಲಯನ್ಸ್ ಕ್ಲಬ್ ನಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯಲ್ಲಿ ರೋಶನಿ ನಿಲಯದ ಮೌಲ್ಯಮಾಪನ ಕುಲಸಚಿವರಾದ ಶ್ರೀಮತಿ ವಿನುತಾ ರೈ, ಶ್ರೀಮತಿ ಕಮಲಾ ಪ್ರಭಾಕರ್ ಭಟ್, ವಿದ್ಯಾರ್ಥಿ ಸಂಘದ ಸದಸ್ಯರಾದ ಕು. ದಿಕ್ಷೀತಾ, ಕು. ಮಂಜುಳಾ ಹಾಗೂ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿಯಾದ ಶ್ರೀ ಬಸವೇಶ್ ಕುಮಾರ್ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದ ಶ್ರೀಮತಿ ಕಮಲಾ ಪ್ರಭಾಕರ್ ಭಟ್, ಇಂದಿನ ದಿನಗಳಲ್ಲಿ ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿ ಪುರುಷರಿಗೆ ಸಮನಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ, ಅವಳಿಗೆ ಇಡೀ ಸಮಾಜ ಪ್ರೋತ್ಸಹ ನೀಡಬೇಕು ಮತ್ತು ಭಯಮುಕ್ತ ವಾತಾವರಣವನ್ನು ನಿರ್ಮಾಣ ಮಾಡಬೇಕೆಂದು ಸಲಹೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀಮತಿ ವಿನುತಾ ರೈ ಅವರು ಮಾತನಾಡಿ ವಿದ್ಯಾರ್ಥಿನಿಯರು ತಮ್ಮ ಭಾಹ್ಯ ಸೌಂದರ್ಯಕ್ಕಿಂತ ಜಾಸ್ತಿ ಪ್ರಮುಖ್ಯತೆ ತಮ್ಮ ಆಂತರಿಕ ಸೌಂದರ್ಯಕ್ಕೆ ನೀಡಬೇಕೆಂದು ಕಿವಿಮಾತನ್ನು ಹೇಳಿದರು.

ಇದರ ಜೊತೆಗೆ ವಿದ್ಯಾರ್ಥಿ ಪರಿಷತ್ತನಿನ ಕಾರ್ಯಗಾರದಲ್ಲಿ ಮಾತನಾಡಿದ ವಿದ್ಯಾರ್ಥಿ ಪರಿಷತ್ತಿನ ಹಿರಿಯ ಕಾರ್ಯಕರ್ತರಾದ ಶ್ರೀಯುತ ಚ ನ ಶಂಕರ್ ರಾವ್ ಅವರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಪರಿಷತ್ತಿನ ಅವಶ್ಯಕತೆ ಮತ್ತು ಪ್ರಾಮುಖ್ಯತೆಯನ್ನು ತಿಳಿಸಿದರು. ಅಲ್ಲದೇ ಕಳೆದ 70ವರ್ಷಗಳಿಂದ ಸಂಘಟನೆ ನಡೆದುಕೊಂಡು ಬಂದ ಹಾದಿ ಹಾಗೂ ಕಾರ್ಯಕ್ರಮಗಳ ಕುರಿತು ಮಾಹಿತಿಯನ್ನು ನೀಡಿದರು. ಜೊತೆಗೆ ಇಂದಿನ ದಿನಗಳಲ್ಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ವೈಚಾರಿಕವಾಗಿ ನಾವು ಯಾವ ರೀತಿಯ ಕಾರ್ಯಕ್ರಮಗಳನ್ನು ಹಾಗೂ ಆಂದೋಲನಗಳನ್ನು ನಡೆಸಿಬೇಕೆಂಬ ಸಲಹೆಯನ್ನು ಸಹ ನೀಡಿದರು. ಕಾರ್ಯಕ್ರಮದ ಸಮಾರೋಪ ಭಾಷಣವನ್ನು ಮಂಗಳೂರು ವಿಭಾಗ ಪ್ರಮುಖರಾದ ಶ್ರೀ ಕೇಶವ ಬಂಗೇರ ಅವರು ಮಾಡಿದರು ಜೊತೆಗೆ ಪ್ರಸಕ್ತ ಸಾಲಿನ ವಿಶ್ವವಿದ್ಯಾಲಯದ ನೂತನ ಕಾರ್ಯಕಾರಿಣಿಯನ್ನು ಸಹ ಘೋಷಣೆ ಮಾಡಿದರು. ವಿಶ್ವವಿದ್ಯಾಲಯದ ಎಬಿವಿಪಿ ಘಟಕದ ಅಧ್ಯಕ್ಷರಾಗಿ ಶ್ರೀ ಸುದೀಪ್ ಹಾಗೂ ನಗರ ಕಾರ್ಯದರ್ಶಿಯಾಗಿ ಶ್ರೀ ಹಿತೇಶ್ ಅವರು ಆಯ್ಕೆಯಾದರು. ಈ ಒಂದು ಕಾರ್ಯಗಾರದಲ್ಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ ಪಧಾದಿಕಾರಿಗಳಾದ ಸುಮನ್, ಭರತ್, ಚರಿತ್ ಅವರು ಮುಂತಾದವರು ಉಪಸ್ಥಿತರಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English