ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ. ಬುಧವಾರ ಈ ಮಹತ್ವದ ಘೋಷಣೆ ಮಾಡಿದ್ದು, ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಕಾರ್ಯಾಧ್ಯಕ್ಷರಾಗಿ ಲಿಂಗಾಯತ ಸಮುದಾಯದ ಈಶ್ವರ್ ಖಂಡ್ರೆ, ಅಲ್ಪಸಂಖ್ಯಾತ ಸಮುದಾಯ ಸಲೀಮ್ ಅಹಮ್ಮದ್ ಹಾಗೂ ವಾಲ್ಮೀಕಿ ಸಮುದಾಯದ ಸತೀಶ್ ಜಾರಕಿಹೊಳಿಯನ್ನು ನೇಮಕ ಮಾಡಲಾಗಿದೆ. ಈ ಮೂವರು ಸಿದ್ದರಾಮಯ್ಯ ಆಪ್ತರಾಗಿದ್ದಾರೆ.
ಡಿಕೆ ಶಿವಕುಮಾರ್‌ಗೆ ಅಧ್ಯಕ್ಷ ಸ್ಥಾನ ನೀಡುದಕ್ಕೆ ಸಿದ್ದರಾಮಯ್ಯ ಬಣದ ಆಕ್ಷೇಪವಿತ್ತು. ಒಂದು ವೇಳೆ ಅಧ್ಯಕ್ಷ ಸ್ಥಾನ ನೀಡುವುದಾದರೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಸಿದ್ದರಾಮಯ್ಯ ಬೇಡಿಕೆ ಇಟ್ಟಿದ್ದರು.
ಆದರೆ ಹೈಕಮಾಂಡ್ ಡಿಕೆಶಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ನೀಡಿ ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವ ಮೂಲಕ ಕೆಪಿಸಿಸಿ ಜಂಜಾಟಕ್ಕೆ ಬ್ರೇಕ್ ಹಾಕಿದೆ.
ಇನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಹಾಗೂ ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿಲಿದ್ದಾರೆ.
Click this button or press Ctrl+G to toggle between Kannada and English