- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ನೇಮಕ

dkshi [1]ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯದಲ್ಲಿ ಪ್ರಬಲ ಸಮುದಾಯದಲ್ಲೊಂದಾದ ಒಕ್ಕಲಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಮೂಲಕ ಲಿಂಗಾಯತ ಸಮುದಾಯದ ಹಾಗೂ ಶಾಸಕಾಂಗ ನಾಯಕ ಸಿದ್ದರಾಮಯ್ಯ ಬಣದ ಎಂ.ಬಿ.ಪಾಟೀಲ್ ಆಸೆಗೆ ತಣ್ಣೀರು ಎರಚಿದಂತಾಗಿದೆ.

ಈಶ್ವರ್ ಖಂಡ್ರೆ ಜೊತೆಗೆ ಸತೀಶ್ ಜಾರಕಿಹೊಳಿ ಹಾಗೂ ಸಲೀಮ್ ಅಹಮದ್ ಅವರೂ ಸಹ ಕೆಪಿಸಿಸಿಗೆ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ (ಲಿಂಗಾಯತ), ಸತೀಶ್ ಜಾರಕಿಹೊಳಿ (ವಾಲ್ಮೀಕಿ ಸಮುದಾಯ), ಸಲೀಂ ಅಹಮದ್ (ಅಲ್ಪಸಂಖ್ಯಾತ) ಅವರನ್ನು ನೇಮಿಸಲಾಗಿದೆ. ಲಿಂಗಾಯತ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಆದ್ಯತೆ ನೀಡುವ ತಂತ್ರಗಾರಿಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಪ್ರದರ್ಶಿಸಿದೆ.

15 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಳಿಕ ದಿನೇಶ್ ಗುಂಡೂರಾವ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಶಿವಕುಮಾರ್ ನೇಮಕಗೊಳಿಸಿರುವ ಹೈಕಮಾಂಡ್, ದಿನೇಶ್ ಗುಂಡೂರಾವ್ ರಾಜೀನಾಮೆ ಅಂಗೀಕರಿಸಿದ್ದು, ಅವರ ಸೇವೆಗೆ ಧನ್ಯವಾದ ಸಲ್ಲಿಸಿದೆ. ಇನ್ನು ಸಿದ್ದರಾಮಯ್ಯ ಅವರು ಈ ಹಿಂದಿನಂತೆ ವಿರೋಧ ಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರಿಯಲಿದ್ದಾರೆ. ವಿಧಾನ ಪರಿಷತ್‌ಗೆ ನಾರಾಯಣಸ್ವಾಮಿ ಮತ್ತು ವಿಧಾನಸಭೆಗೆ ಅಜಯ್ ಸಿಂಗ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.