ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಆದಿತ್ಯ ರಾವ್‌ನ ಮಂಪರು ಪರೀಕ್ಷೆ

11:49 AM, Friday, March 13th, 2020
Share
1 Star2 Stars3 Stars4 Stars5 Stars
(No Ratings Yet)
Loading...

Adithya-Rao

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಶಂಕಿತ ಉಗ್ರ ಆದಿತ್ಯ ರಾವ್‌ನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಪೊಲೀಸರು ನಿರ್ಧರಿಸಿದ್ದಾರೆ.

ಜ.20ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಶಂಕಿತ ಉಗ್ರ ಆದಿತ್ಯ ರಾವ್‌ನನ್ನು ಮಂಗಳವಾರ ತಹಶೀಲ್ದಾರ್ ಎದುರು ಗುರುತು ಪತ್ತೆ ಪರೇಡ್ ನಡೆಸಲಾಗಿತ್ತು. ಆದಿತ್ಯ ರಾವ್‌ನನ್ನು ನೋಡಿದ್ದ 15 ಮಂದಿ ಪ್ರತ್ಯಕ್ಷ ಸಾಕ್ಷಿಗಳನ್ನು ಕರೆಸಿ ಗುರುತು ಪತ್ತೆ ಪರೇಡ್ ನಡೆಸಲಾಗಿತ್ತು.

ಘಟನೆಯಲ್ಲಿ ಬಂಧಿತ ಆದಿತ್ಯ ರಾವ್‌ನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಬಳಿಕ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿರುವ ಮಂಗಳೂರು ಜೈಲಿನಲ್ಲೇ ಆತನ ಗುರುತು ಪತ್ತೆ ಪರೇಡ್ ನಡೆಸಲಾಗಿದೆ.

ಆರೋಪಿ ಆದಿತ್ಯ ರಾವ್‌ನ ತನಿಖೆ ನಡೆಸಿದರೂ ಆತ ಕೆಲವೊಂದು ಸಂದರ್ಭದಲ್ಲಿ ಸರಿಯಾಗಿ ಮಾಹಿತಿಯನ್ನು ನೀಡಿಲ್ಲ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗೆ ಆತನನ್ನು ಮಂಪರು ಪರೀಕ್ಷೆ ನಡೆಸುವಂತೆ ತನಿಖಾ ತಂಡ ಮಂಗಳೂರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದೆ. ಇದಕ್ಕೆ ನ್ಯಾಯಾಲಯ ಒಪ್ಪಿಗೆ ನೀಡಿದರೆ, ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಆದಿತ್ಯ ರಾವ್‌ನ ಮಂಪರು ಪರೀಕ್ಷೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English