ಕೊರೊನಾ ವೈರಸ್ ಶಂಕೆ : ವಿದೇಶದಿಂದ ಮಣಿಪಾಲಕ್ಕೆ ಆಗಮಿಸಿದ್ದ ಮೂರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

1:19 PM, Friday, March 13th, 2020
Share
1 Star2 Stars3 Stars4 Stars5 Stars
(No Ratings Yet)
Loading...

coronavirus

ಉಡುಪಿ : ವಿದೇಶದಿಂದ ಮಣಿಪಾಲಕ್ಕೆ ಆಗಮಿಸಿದ್ದ ಮೂರು ವಿದ್ಯಾರ್ಥಿಗಳನ್ನು ಕೊರೊನಾ ವೈರಸ್ ಸೋಂಕಿರುವ ಶಂಕೆಯ ಮೇರೆಗೆ ಮಣಿಪಾಲ ಮಾಹೆಯ ಮೂವರನ್ನು ಕೆಎಂಸಿ ಆಸ್ಪತ್ರೆಯ ಪ್ರತ್ಯೇಕಿತ ವಾರ್ಡ್‌ಗೆ ದಾಖಲಿಸಲಾಗಿದೆ.

ಈ ಪೈಕಿ ಇಬ್ಬರು ವಿದ್ಯಾರ್ಥಿಗಳು ಗುರುವಾರ ಅಮೇರಿಕಾ ಮತ್ತು ಕುವೈತ್‌ಯಿಂದ ಬಂದಿದ್ದರು. ಇನ್ನೋರ್ವ ವಿದ್ಯಾರ್ಥಿ ಶುಕ್ರವಾರ ಮಲೇಶ್ಯದಿಂದ ಆಗಮಿಸಿದ್ದ.

ವಿದೇಶದಿಂದ ಆಗಮಿಸಿದ್ದ ಈ ಮೂವರಲ್ಲಿ ಕೆಮ್ಮು ಮತ್ತು ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು, ಈ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಯ ಪ್ರತ್ಯೇಕಿತ ಐಸೋಲೇಟೆಡ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉಡುಪಿ ಡಿಎಚ್‌ಒ ಡಾ.ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ‌.

ಗುರುವಾರ ದಾಖಲಾದ ವಿದ್ಯಾರ್ಥಿಗಳ ಗಂಟಲ ದ್ರವ್ಯ ಹಾಗೂ ರಕ್ತವನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಇವತ್ತು ಸಂಜೆಯೊಳಗೆ ವರದಿ ಬರುವ ಸಾಧ್ಯತೆ ಇದೆ. ಶುಕ್ರವಾರ ದಾಖಲಾದ ವಿದ್ಯಾರ್ಥಿ ಕಳುಹಿಸಿದ್ದು, ಇನ್ನೆರಡು ದಿನಗಳಲ್ಲಿ ವರದಿ ಬರಲಿದೆ ಎಂದು ಡಿಎಚ್‌ಒ ತಿಳಿಸಿದ್ದಾರೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English