ಬೆಂಗಳೂರು : ಕೊರೊನಾ ವೈರಸ್ ಭೀತಿ ಬಗ್ಗೆ ಶುಕ್ರವಾರ ವಿಧಾನಸಭೆ ಕಲಾಪದಲ್ಲಿಯೂ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಮಾಸ್ಕ್ ಹಾಗೂ ಔಷಧಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುವ ಮೆಡಿಕಲ್ ಶಾಪ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಸಂದೇಶ ರವಾನಿಸಿದರು.
ಮಾಸ್ಕ್ ಹಾಗೂ ಔಷಧಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುವ ಮೆಡಿಕಲ್ ಶಾಪ್ ಗಳ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಶ್ರೀರಾಮುಲು ತಿಳಿಸಿದ್ದಾರೆ.
ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ. ಯಾರೂ ವದಂತಿಗಳಿಗೆ ಕಿವಿಗೊಡಬಾರದು. ಕೊರೊನಾ ಕುರಿತು ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
Click this button or press Ctrl+G to toggle between Kannada and English