ಕೊರೊನಾ ಭೀತಿ ಹಿನ್ನೆಲೆ : ದೆಹಲಿಯಲ್ಲಿ ಎಲ್ಲ ಐಪಿಎಲ್ ಪಂದ್ಯ ರದ್ದು

3:02 PM, Friday, March 13th, 2020
Share
1 Star2 Stars3 Stars4 Stars5 Stars
(No Ratings Yet)
Loading...

IPL

ನವದೆಹಲಿ : ದೆಹಲಿಯಲ್ಲಿ ಆಯೋಜನೆಗೊಂಡಿದ್ದ ಎಲ್ಲ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ.

ಕ್ರಿಕೆಟ್ ವೀಕ್ಷಿಸಲು ಸಾವಿರಾರು ಮಂದಿ ಕ್ರೀಡಾಂಗಣಕ್ಕೆ ಬರುತ್ತಾರೆ. ಯಾರು ಬರುತ್ತಾರೆ? ಅವರು ಎಲ್ಲಿಂದ ಬರುತ್ತಿದ್ದಾರೆ ಎನ್ನುವುದು ತಿಳಿಯುವುದು ಅಸಾಧ್ಯ. ಒಬ್ಬ ವ್ಯಕ್ತಿ ಬಂದರೂ ಹಲವು ಮಂದಿಗೆ ಕೊರೊನಾ ಹರಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಐಪಿಎಲ್ ಸೇರಿದಂತೆ ಎಲ್ಲ ಕ್ರೀಡಾ ಕಾರ್ಯಕ್ರಮವನ್ನು ರದ್ದುಪಡಿಸುತ್ತಿದ್ದೇವೆ ಎಂದು ತಿಳಿಸಿದರು.

ಏಕದಿನ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೇ ಆಯೋಜಿಸಲು ಬಿಸಿಸಿಐ ಮುಂದಾಗಿದೆ. ಹೀಗಾಗಿ ಐಪಿಎಲ್ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೇ ಆಯೋಜಿಸುತ್ತಾ ಎನ್ನುವುದು ಇನ್ನು ನಿರ್ಧಾರವಾಗಿಲ್ಲ.

ಈಗಾಗಲೇ ದೆಹಲಿ ಸರ್ಕಾರ ಸಾರ್ವಜನಿಕವಾಗಿ 200ಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ಸಮಾರಂಭವನ್ನು ನಿಷೇಧಿಸಿದ್ದು, ಶಾಲಾ, ಕಾಲೇಜು, ಸಿನಿಮಾ ಮಂದಿರಗಳು ಮಾರ್ಚ್ 31ರವರೆಗೆ ಮುಚ್ಚುವಂತೆ ಆದೇಶಿಸಿದೆ.

 

     

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English