ಕೊರೋನಾ ತಡೆಗೆ ಸರ್ಕಾರದ ನಡೆ : ಒಂದು ವಾರದ ಮಟ್ಟಿಗೆ ಮಾಲ್​, ಥಿಯೇಟರ್​, ಮದುವೆ ಸಭೆಗಳಿಗೆ ನಿಷೇಧ

5:08 PM, Friday, March 13th, 2020
Share
1 Star2 Stars3 Stars4 Stars5 Stars
(No Ratings Yet)
Loading...

bsy

ಬೆಂಗಳೂರು : ಮಹಾಮಾರಿ ಕೊರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜನಸಂದಣಿ ಸೇರುವ ಮಾಲ್ ಹಾಗೂ ಥಿಯೇಟರ್ಗಳನ್ನು ಒಂದು ವಾರದ ಮಟ್ಟಿಗೆ ಬಂದ್ ಮಾಡುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಮಾಡಿದ್ದಾರೆ. ಕೊರೋನಾ ವೈರಸ್ ಒಬ್ಬರಿಂದ ಒಬ್ಬರಿಗೆ ಅತಿ ಶೀಘ್ರದಲ್ಲಿ ಹರಡುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.

ವಿಶ್ವದೆಲ್ಲೆಡೆ ಆತಂಕ ಮೂಡಿಸಿರುವ ಮಾರಣಾಂತಿಕ ಕೊರೋನಾಗೆ ರಾಜ್ಯದಲ್ಲಿ ಈಗಾಗಲೇ 6 ಜನ ಸೋಂಕಿತರಾಗಿದ್ದು, ಕಲಬುರ್ಗಿ ವೃದ್ಧ ಸಾವನ್ನಪ್ಪುವ ಮೂಲಕ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ವೈದ್ಯರು ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿದ್ದರು.

ಸಭೆ ಬಳಿಕ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್ವೈ, ಸಾರ್ವಜನಿಕರ ಹಿತದೃಷ್ಟಿ ಹಿನ್ನೆಲೆ ಒಂದು ವಾರಗಳ ಕಾಲ ಮಾಲ್, ಥಿಯೇಟರ್, ಪಬ್, ನೈಟ್ ಔಟ್ ಗಳನ್ನು ಸ್ಥಗಿತಗೊಳಿಸಲಾಗುವುದು. ಅಲ್ಲದೇ ಯಾವುದೇ ಸಭೆ, ಸಮಾರಂಭ, ಮದುವೆ, ಜಾತ್ರೆ ನಡೆಸದಂತೆ ಆದೇಶಿಸಿರುವುದಾಗಿ ಘೋಷಿಸಿದ್ದಾರೆ

ವೈದ್ಯಕೀಯ ನುರಿತರ ಅಭಿಪ್ರಾಯ ಪಡೆದು ಈ ನಿರ್ಣಯ ಕೈಗೊಳ್ಳಲಾಗಿದ್ದು, ಒಂದು ವಾರದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮಕೈಗೊಳ್ಳಲಾಗುವುದು. ಸಾರ್ವಜನಿಕರು ಸಾಧ್ಯವಾದರೆ ಪ್ರವಾಸ ರದ್ದು ಮಾಡುವುದು ಒಳ್ಳೆಯದು ಎಂದರು.

ಒಂದರಿಂದ ಆರನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇರುವುದಿಲ್ಲ. ಆದರೆ, ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ಜೊತೆಗೆ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಸದಂತೆ ಕೂಡ ಸೂಚನೆ ನೀಡಲಾಗಿದೆ ಎಂದರು.

ಜತೆಗೆ, ಒಬ್ಬರಿಂದ ಒಬ್ಬರಿಗೆ ಕನಿಷ್ಟ ಆರು ಅಡಿ ದೂರ ನಿಂತು ಸಂಪರ್ಕಿಸುವುದು ಉತ್ತಮ ಎಂದ ಬಿಎಸ್ವೈ, ಶೇಕ್ ಹ್ಯಾಂಡ್ ಕೊಡುವುದು, ಆಲಿಂಗನ ಮಾಡದಂತೆ ಮನವಿ ಮಾಡಿದ್ದಾರೆ. ಸರ್ಕಾರದ ಈ ಆದೇಶದಿಂದ ಸಾರ್ವಜನಿಕರಿಗೆ ತೊಂದರೆಯಾಗಬಹುದು ಆದರೆ, ಅನಿವಾರ್ಯ ಕಾರಣಗಳಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದ್ದು ಸಹಕರಿಸುವಂತೆ ಬಿಎಸ್ವೈ ಮನವಿ ಮಾಡಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English