ಕೊರೋನ ಮುಂಜಾಗ್ರತಾ ಕ್ರಮವಾಗಿ ಪಿಲಿಕುಳ ನಿಸರ್ಗಧಾಮ ಒಂದು ವಾರ ಪ್ರವೇಶ ನಿರ್ಬಂಧ

11:11 PM, Sunday, March 15th, 2020
Share
1 Star2 Stars3 Stars4 Stars5 Stars
(No Ratings Yet)
Loading...

pilikulaಮಂಗಳೂರು : ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮತ್ತು ಜಿಲ್ಲಾಡಳಿತದ ಸೂಚನೆಯ ಮೇರೆಗೆ ಮಾ.14ರಿಂದ ಅನ್ವಯಗೊಂಡಂತೆ 1 ವಾರಗಳ ಕಾಲ ಪಿಲಿಕುಳ ನಿಸರ್ಗಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಇಲ್ಲಿ ಜೈವಿಕ ಉದ್ಯಾನವನ, ವಿಜ್ಞಾನ ಕೇಂದ್ರ, ಸರೋವರ ಉದ್ಯಾನ, ಬೋಟಿಂಗ್, ವಾಟರ್ ಅಮ್ಯೂಸ್‌ಮೆಂಟ್, ಗಾಲ್ಫ್ ಎಂದೆಲ್ಲಾ ದಿನಂಪ್ರತಿ ಸಾವಿರಾರು ಮಂದಿ ಆಗಮಿಸುತ್ತಿದ್ದಾರೆ. ಅಲ್ಲದೆ, 1300ಕ್ಕೂ ಅಧಿಕ ಪ್ರಭೇದಗಳ ಪ್ರಾಣಿ, ಪಕ್ಷಿ, ಸಸ್ತನಿಗಳಿವೆ. ಇದನ್ನು ವೀಕ್ಷಿಸಲು ಸಾವಿರಾರು ಮಂದಿ ಪಾಲ್ಗೊಳ್ಳುತ್ತಿದ್ದು, ಕೊರೋನ ಭೀತಿಯಿಂದ ದೂರವಾಗಿಸುವ ಸಲುವಾಗಿ ಒಂದು ವಾರ ಪ್ರವೇಶ ನಿರ್ಬಂಧ ಹೇರಲಾಗಿದೆ ಎಂದು ನಿಸರ್ಗಧಾಮದ ನಿರ್ದೇಶಕ ಎಚ್. ಜಯಪ್ರಕಾಶ್ ಭಂಡಾರಿ ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English