ಬೆಂಗಳೂರು : ಕೊರೊನಾ ವೈರಸ್ ಸೋಂಕು ಭೀತಿ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಆದರೆ 7 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಮುಂದಿನ ತರಗತಿಗಳಿಗೆ ಬಡ್ತಿ ನೀಡುವ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಈ ಬಗ್ಗೆ ವಿವರಣೆ ನೀಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ.ಜಿ. ಜಗದೀಶ್, ಈಗಾಗಲೇ 1 ರಿಂದ 6ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ರಜೆ ಘೋಷಣೆ ಮಾಡಲಾಗಿದೆ. 7ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ 2020ರ ಮಾರ್ಚ್ 16 ರಿಂದ ಪರೀಕ್ಷೆಗಳು ನಡೆಯಬೇಕಿತ್ತು.
ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಒಬ್ಬರಿಂದ ಮತ್ತೊಬ್ಬರಿಗೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ತಾತ್ಕಾಲಿಕವಾಗಿ ಅಧ್ಯಯನ ರಜೆ ಘೋಷಣೆ ಮಾಡಲಾಗಿದೆ. ಪರಿಸ್ಥಿತಿ ತಿಳಿಗೊಂಡ ತಕ್ಷಣ ಹೊಸ ವೇಳಾಪಟ್ಟಿ ಪ್ರಕಟಿಸಿ 7 ನೇ ತರಗತಿ ವಿದ್ಯಾರ್ಥಿಗಳಿಗೆ ‘ಮೌಲ್ಯಾಂಕನ ಪರೀಕ್ಷೆ’ ಹಾಗೂ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು ಎಂದರು.
Click this button or press Ctrl+G to toggle between Kannada and English
March 23rd, 2020 at 22:29:23
I have