- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಚೆನ್ನೈನಲ್ಲಿ ಕೊರೊನಾ ಭೀತಿ ನಡುವೆಯೂ ಸಿಎಎ, ಎನ್​ಆರ್​ಸಿ ವಿರುದ್ಧ ಪ್ರತಿಭಟನೆ

chennai [1]

ಚೆನ್ನೈ : ಕೊರೊನಾ ಭೀತಿಗೆ ಈಡಿ ಜಗತ್ತೆ ಬೆಚ್ಚಿಬಿದ್ದಿದೆ. ಹೀಗಾಗಿ ಒಂದು ಜಾಗದಲ್ಲಿ ನೂರಕ್ಕಿಂತ ಹೆಚ್ಚು ಜನ ಸೇರಬಾರದು ಎಂದು ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡಿನ ಚೆನ್ನೈನಲ್ಲಿ ಸಾವಿರಾರು ಜನರು ಸಿಎಎ, ಎನ್ಆರ್ಸಿ ಮತ್ತು ಎನ್‍ಪಿಆರ್ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ.

ಮದ್ರಾಸ್ ಹೈಕೋರ್ಟ್ ಬಳಿ ತಮಿಳುನಾಡು ಥೌಹೀದ್ ಜಮಾತ್ ಸದಸ್ಯರು ಸೇರಿದಂತೆ ಅನೇಕ ಜನರು ಸಿಎಎ, ಎನ್ಆರ್ಸಿ ಮತ್ತು ಎನ್‍ಪಿಆರ್ ವಿರುದ್ಧ ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರತಿಭಟನೆಯ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಟೀಕೆ ಹಾಗೂ ವಿರೋಧ ವ್ಯಕ್ತವಾಗಿದೆ.

ಮಹಾಮಾರಿ ಕೊರೊನಾ ವೈರಸ್‍ನಿಂದ ದೇಶ ಸಂಕಷ್ಟಕ್ಕೆ ಸಿಲುಕಿದೆ. ಅದಕ್ಕೆ ಪರಿಹಾರ ಕೈಗೊಳ್ಳಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂದಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಪ್ರತಿಭಟನೆ ಅಗತ್ಯವಿತ್ತೇ? ಇದೊಂದು ಉದ್ದೇಶಪೂರ್ವಕ ಹಾಗೂ ಪ್ರೇರಣೆಯಿಂದ ನಡೆಯುತ್ತಿರುವ ಪ್ರತಿಭಟನೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಬುಧವಾರ ಮಧ್ಯಾಹ್ನ 2 ಗಂಟೆವರೆಗಿನ ಮಾಹಿತಿ ಪ್ರಕಾರ ಭಾರತದಲ್ಲಿ ಒಟ್ಟು 147 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 14 ಜನರು ಚೇತರಿಸಿಕೊಂಡರೆ ಮೂರು ಮೃತಪಟ್ಟಿದ್ದಾರೆ. ಉಳಿದಂತೆ 130 ಜನರಿಗೆ ಚಿಕಿತ್ಸೆ ಕೊಡಲಾಗುತ್ತದೆ. ತಮಿಳುನಾಡಿನಲ್ಲಿ ಓರ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.