ಕೊರೋನಾ ವೈರಸ್ ಭೀತಿ : ಆದಿಚುಂಚನಗಿರಿ ಮಠ ಮುಂದಿನ ಎರಡು ವಾರ ಬಂದ್​ ಮಾಡಲು ನಿರ್ಧಾರ

10:23 AM, Thursday, March 19th, 2020
Share
1 Star2 Stars3 Stars4 Stars5 Stars
(No Ratings Yet)
Loading...

tumakuru

ತುಮಕೂರು : ಮಾರಣಾಂತಿಕ ಕೊರೋನಾ ವೈರಸ್‌ ಹರಡುವ ಭೀತಿ ಎಲ್ಲೆಡೆ ಕಾಡುತ್ತಿದೆ. ಈಗಾಗಲೇ ಅನೇಕ ದೇವಾಲಯಗಳನ್ನು ಮುಚ್ಚಲಾಗಿದೆ. ಅದೇ ರೀತಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠವನ್ನು ಮುಂದಿನ ಎರಡು ವಾರ ಬಂದ್ ಮಾಡಲು ನಿರ್ಧಾರಿಸಲಾಗಿದೆ.

ಶನಿವಾರ ಮತ್ತು ಭಾನುವಾರ ಕಾಲಭೈರವನ ದರ್ಶನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಲ್ಲಿ ಅನ್ನ ಸಂತರ್ಪಣೆ ಕೂಡ ನಡೆಯುತ್ತದೆ. ಆದರೆ, ಇತ್ತೀಚೆಗೆ ವಿಶ್ವದಾದ್ಯಂತ ಕೊರೋನಾ ವೈರಸ್ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 2 ವಾರಗಳ ಕಾಲ ಭಕ್ತರು ದೇವರ ದರ್ಶನಕ್ಕೆ ಆಗಮಿಸದಂತೆ ಆದಿಚುಂಚನಗಿರಿ ಸಂಸ್ಥಾನ ಮಠದ ಜಗದ್ಗುರು ಡಾ. ನಿರ್ಮಲಾನಂದನಾಥ ಶ್ರೀಗಳು ಭಕ್ತಾದಿಗಳಲ್ಲಿ ಕೋರಿದ್ದಾರೆ.

ಜಗತ್ತಿನಾದ್ಯಂತ ಕೊರೋನಾ ವೈರಸ್ಗೆ ಇದುವರೆಗೂ 8 ಸಾವಿರಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. 2 ಲಕ್ಷಕ್ಕೂ ಅಧಿಕ ಜನರಿಗೆ ಕೊರೋನಾ ಸೋಂಕು ತಗುಲಿದೆ. ಭಾರತದಲ್ಲಿ ಈಗಾಗಲೇ ಮೂವರು ಸಾವನ್ನಪ್ಪಿದ್ದು, ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ 14 ಜನರಿಗೆ ಸೋಂಕು ತಗುಲಿದೆ. ಹೀಗಾಗಿ, ಮಠದಲ್ಲಿ ಜನ ಸೇರುವುದರಿಂದ ಕೊರೋನಾ ವೈರಸ್ ಹರಡುವ ಆತಂಕ ಎದರಾಗಿದೆ. ಈ ಹಿನ್ನೆಲೆಯಲ್ಲಿ ದೇವರ ದರ್ಶನ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English