ಕೊರೋನಾ ಭೀತಿ : ಇಂದಿನಿಂದ ವಿಮಾನ ನಿಲ್ದಾಣದಲ್ಲಿ ಸ್ಟ್ಯಾಂಪಿಂಗ್ ವ್ಯವಸ್ಥೆ ಜಾರಿ

12:30 PM, Thursday, March 19th, 2020
Share
1 Star2 Stars3 Stars4 Stars5 Stars
(No Ratings Yet)
Loading...

stamping

ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ ವೈರಸ್ ಆತಂಕ ಹೆಚ್ಚುತ್ತಲೇ ಇದೆ. ಸೋಂಕು ಹರಡುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದರೂ ಅನೇಕರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ಸ್ಟ್ಯಾಂಪಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ವಿದೇಶದಿಂದ ಕರ್ನಾಟಕಕ್ಕೆ ಬರುತ್ತಿರುವವರಿಂದಲೇ ಕೊರೋನಾ ಸೋಂಕು ಹೆಚ್ಚಾಗಿ ಹರಡುತ್ತಿರುವುದರಿಂದ ಆರೋಗ್ಯ ಇಲಾಖೆ ಹೆಚ್ಚಿನ ಕಟ್ಟೆಚ್ಚರ ವಹಿಸಿದೆ. ಏರ್ಪೋರ್ಟ್ಗಳಲ್ಲಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸುವಾಗ ಕೊರೋನಾ ಲಕ್ಷಣಗಳು ಕಾಣದಿದ್ದರೆ ಅಂಥವರನ್ನು ಐಸೋಲೇಷನ್ನಲ್ಲಿ ಇರಿಸಲಾಗುತ್ತಿದೆ. ಆದರೆ, ಹಾಗೆ ಮನೆಯಲ್ಲೇ ಸ್ವನಿರ್ಬಂಧ ಹೇರಿಕೊಂಡು 14 ದಿನಗಳು ಇರಲಾರದೆ ಕೊರೋನಾ ಶಂಕಿತರು ಹೊರಗಡೆ ಸುತ್ತಾಡಲಾರಂಭಿಸಿದ್ದಾರೆ. ಇದು ಆರೋಗ್ಯ ಇಲಾಖೆಗೆ ದೊಡ್ಡ ತಲೆನೋವಾಗಿದೆ.

ಕೊರೊನ ನಿಯಂತ್ರಣದ ಮುಂಜಾಗೃತ ಕ್ರಮವಾಗಿ ವಿದೇಶದಿಂದ ಬೆಂಗಳೂರಿಗೆ ಬರುತ್ತಿರುವ ಪ್ರಯಾಣಿಕರಿಗೆ 14 ದಿನಗಳ ಪ್ರತ್ಯೇಕಿಕರಣ ಅತ್ಯವಶ್ಯಕ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಕೈಗಳ ಮೇಲೆ ಸ್ಟ್ಯಾಂಪಿಂಗ್ ಮಾಡಲಾಗುತ್ತಿದೆ.

ಇದರಿಂದ ಒಂದು ವೇಳೆ ಶಂಕಿತರು ಹೊರಗೆ ಓಡಾಡಿದರೆ ಸಾರ್ವಜನಿಕರಿಗೆ ತಿಳಿದು, ಆರೋಗ್ಯ ಹೆಲ್ಪ್ಲೈನ್ಗೆ ಮಾಹಿತಿ ನೀಡಲು ಅನುಕೂಲವಾಗಲೆಂದು ಈ ರೀತಿ ಮಾಡಲಾಗಿದೆ. ಅಷ್ಟೇ ಅಲ್ಲದೆ, ಬಹುತೇಕ ಎಲ್ಲ ಕಡೆ ಕೊರೋನಾ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಿರುವುದರಿಂದ ಅಲ್ಲೂ ಸಿಕ್ಕಿಹಾಕಿಕೊಳ್ಳೋದು ಪಕ್ಕಾ ಎಂಬ ಕಾರಣಕ್ಕೆ ಈ ರೀತಿ ಮಾಡಲು ನಿರ್ಧರಿಸಲಾಗಿದೆ. ಶಂಕಿತರ ಬೇಜವಾಬ್ದಾರಿಯಿಂದ ಸೋಂಕು ಹರಡದಂತೆ ತಡೆಯಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English