ಮಂಗಳೂರು : ಕೊರೊನಾ ವೈರಸ್ ಭೀತಿ ಹಿನ್ನೆಲೆ ಕೇರಳ- ಕರ್ನಾಟಕದ ಗಡಿಭಾಗದಲ್ಲಿ ಇಂದಿನಿಂದ ತಪಾಸಣೆ ಕಾರ್ಯ ಆರಂಭವಾಗಿದೆ.
ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳ ಗಡಿಭಾಗದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಮಂಗಳೂರು ಮತ್ತು ಕೇರಳ ಗಡಿಭಾಗವಾದ ತಲಪಾಡಿಯಲ್ಲಿ ಬಸ್ ಮತ್ತು ಖಾಸಗಿ ವಾಹನದಲ್ಲಿ ಮಂಗಳೂರಿಗೆ ಬರುವ ಪ್ರಯಾಣಿಕರನ್ನು ಪರೀಕ್ಷೆ ಮಾಡಲಾಗುತ್ತಿದೆ. ಪ್ರತಿಯೊಬ್ಬ ಪ್ರಯಾಣಿಕರ ತಾಪಮಾನ ತಪಾಸಣೆ ಮಾಡಲಾಗುತ್ತಿದ್ದು, ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದರೆ ರೋಗಿಗಳನ್ನು ಮಂಗಳೂರು ಆಸ್ಪತ್ರೆಗೆ ಕಳಿಸಲಾಗುತ್ತಿದೆ.
Click this button or press Ctrl+G to toggle between Kannada and English