- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಸೇವೆಗಳು ಬಂದ್

dc office Mangalore [1]ಮಂಗಳೂರು: ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಸರಕಾರಿ ಸೇವೆಗಳನ್ನು ಮಾ. 31ರ ವರೆಗೆ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಆದೇಶಿಸಿದ್ದಾರೆ.

ಸಾರ್ವಜನಿಕರು ಸರಕಾರದ ವಿವಿಧ ಸೇವೆಗಳನ್ನು ಪಡೆಯುವ ಉದ್ದೇಶದಿಂದ ಹೆಚ್ಚಿನ ಸಂಖ್ಯೆ ಯಲ್ಲಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದ ಕಚೇರಿಗಳಿಗೆ ಭೇಟಿ ನೀಡುವುದರಿಂದ ಜನದಟ್ಟಣೆ ಉಂಟಾಗುತ್ತಿದ್ದು, ಇದು ವೈರಾಣು ಹರಡಲು ಅನುಕೂಲ ವಾತಾವರಣ ಮಾಡಿಕೊಟ್ಟಂತಾಗು ತ್ತದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗುರುವಾರ ಹೊರಡಿಸಿರುವ ಆದೇಶ ದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.