ಮಂಗಳೂರು : ಧಾರ್ಮಿಕ ಕೇಂದ್ರಗಳಲ್ಲಿ ಜನಜಂಗುಳಿ ಸೇರುವುದನ್ನು ನಿಯಂತ್ರಿಸಲು ಎಲ್ಲಾ ಮಸೀದಿಗಳಲ್ಲಿ ಶುಕ್ರವಾರದ ಜುಮಾ ನಮಾಝ್ ಸಹಿತ ದಿನದ ಐದು ಬಾರಿಯ ನಮಾಝ್‌ಗಳನ್ನು ಮಾ.31ರವರೆಗೆ ನಿಲ್ಲಿಸಲು ವಕ್ಫ್ ಇಲಾಖೆಯ ಕಾರ್ಯದರ್ಶಿ ಆದೇಶಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿಯ ಉಲ್ಲೇಖದಂತೆ ಎಲ್ಲರೂ ಮನೆಯಲ್ಲೇ ನಮಾಝ್ ನಿರ್ವಹಿಸಬೇಕು ಮತ್ತು ತುರ್ತು ಹೊರತುಪಡಿಸಿ ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಬಾರದು ಎಂದು ಸೂಚಿಸಿದ್ದಾರೆ.
ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಈ ಬಗ್ಗೆ ಪ್ರಕಟನೆ ಹೊರಡಿಸಿ ವಕ್ಫ್ ಇಲಾಖೆಯ ಕಾರ್ಯದರ್ಶಿ ಆದೇಶವನ್ನು ಪಾಲಿಸಲು ಸೂಚಿಸಿದ್ದಾರೆ.
Click this button or press Ctrl+G to toggle between Kannada and English