ಬೆಂಗಳೂರು: ಕೊರೋನಾ ವೈರಸ್ ಭೀತಿಯಲ್ಲಿ ರಾಜ್ಯ ಸಂಪೂರ್ಣ ಲಾಕ್ ಡೌನ್ ಆಗಿರುವ ಹಿನ್ನಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ 1 ಸಾವಿರ ವೇತನ, 2 ತಿಂಗಳ ಪಡಿತರ ಮುಂಗಡ ವಿತರಣೆ ಸಹಿತ ಕರ್ನಾಟಕ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
ಕರ್ನಾಟಕದಲ್ಲೂ ಮಾರಕ ಕೊರೋನಾ ವೈರಸ್ ಹಬ್ಬುತ್ತಿರುವ ಹಿನ್ನಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಇದೇ ಕಾರಣಕ್ಕೆ ಸಾರ್ವಜನಿಕರಿಗೆ ತೊಂದರೆಯಾಗದ ನಿಟ್ಟಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, ಕಟ್ಟಡ ಕಾರ್ಮಿಕರಿಗೆ ತಿಂಗಳಿಗೆ 1000 ರೂ ಸಹಾಯ ಧನ ನೀಡಲು ನಿರ್ಧರಿಸಲಾಗಿದೆ. ಅಂತೆಯೇ ರೇಷನ್ ಕಾರ್ಡ್ ಹೊಂದಿರುವವರಿಗೆ 2 ತಿಂಗಳ ಪಡಿತರವನ್ನು ಮುಂಗಡವಾಗಿ ನೀಡಲು ಸೂಚನೆ ನೀಡಲಾಗಿದೆ.
ಸಾಮಾಜಿಕ ಭದ್ರತಾ ಪಿಂಚಣಿ ಹಣವನ್ನೂ ಕೂಡ ಮುಂಗಡವಾಗಿ ನೀಡಲು ಸರ್ಕಾರ ನಿರ್ಧರಿಸಿದ್ದು, ಎರಡು ತಿಂಗಳ ಮಾನವ ದಿನಗಳ ಬಾಬ್ತು ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಅಂತೆಯೇ ಬಡವರ ಬಂಧು ಯೋಜನೆಯಲ್ಲಿ ಸಾಲ ಪಡೆದವರ ಸಂಪೂರ್ಣ ಸಾಲ ಮನ್ನಾ ಮಾಡುದಾಗಿ ಸರ್ಕಾರ ಘೋಷಣೆ ಮಾಡಿದೆ.
Click this button or press Ctrl+G to toggle between Kannada and English