ಮಂಗಳೂರಿನ ಆಸ್ಪತ್ರೆಗಳು ಫುಲ್ : ಕೇರಳದ ಅಂಬ್ಯುಲೆನ್ಸ್ ಗಳಿಗೆ ತಲಪಾಡಿ ಗಡಿಯಲ್ಲಿ ನಿರ್ಬಂಧ

5:07 PM, Wednesday, March 25th, 2020
Share
1 Star2 Stars3 Stars4 Stars5 Stars
(No Ratings Yet)
Loading...

Kerala-Ambulenceಮಂಗಳೂರು :  ಮಂಗಳವಾರ ಅತೀ ಹೆಚ್ಚು ರೋಗಿಗಳು ಕೇರಳದಿಂದ ಮಂಗಳೂರಿಗೆ ಬಂದಿದ್ದಾರೆ. ಆದರೆ ಜಿಲ್ಲಾಡಳಿತ ಒಂದು ನಿರ್ಧಾರ ತೆಗೆದುಕೊಂಡಿದೆ. ಸದ್ಯದ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗಳು ನಮಗೆ ಸಾಕಾಗಲ್ಲ, ಹೀಗಾಗಿ ಹೊರಗಿನ ಯಾವುದೇ ವಾಹನ, ಅಂಬ್ಯುಲೆನ್ಸ್ ಸೇರಿ ಯಾವುದನ್ನೂ ಬಿಡಬಾರದು ಅಂತ ನಿರ್ಧರಿಸಲಾಗಿದೆ. ಎಲ್ಲಾ ಅಂಬ್ಯುಲೆನ್ಸ್ ಗಳನ್ನ ತಲಪಾಡಿ ಗಡಿಯಲ್ಲಿ ನಿರ್ಬಂಧಿಸಲಾಗುತ್ತಿದೆ. ಎಲ್ಲಾ ವಾಹನಗಳನ್ನು ಗಡಿಯಲ್ಲಿ ಬಂದ್ ಮಾಡಲಾಗಿದೆ ಎಂದು  ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಾರ್ಚ್ 26 ರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಸ್ತಬ್ದಗೊಳ್ಳಲಿದೆ.

ಮಾರಕ ಕೋವಿಡ್ ಸೋಂಕಿನಿಂದ ಇಡೀ ದೇಶವೇ ಕಂಗೆಟ್ಟಿದೆ ಅಂತೆಯೇ ಪ್ರಧಾನಿ 21 ದಿನಗಳ ಕಾಲ ಲಾಕ್ ಡೌನ್ ಮಾಡಿ ಆದೇಶ ನೀಡಿದ್ದು ಇದರೊಂದಿಗೆ ಅಗತ್ಯ ವಸ್ತುಗಳ ಅಂಗಡಿಗಳು ಸಾರ್ವಜನಿಕರಿಗೆ ಮುಕ್ತವಾಗಿತ್ತು ಆದರೆ ನಾಳೆಯಿಂದ ಅದನ್ನು ಸೇರಿದಂತೆ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಆಗಲಿದೆ ಎಂದು ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದರು ಜನರಿಗೆ ಬೇಕಾದ ಎಲ್ಲಾ ಸವಲತ್ತುಗಳನ್ನು ನಾವೇ ಮನೆಗೆ ತಲುಪಿಸುತ್ತೇವೆ. ಸರ್ಕಾರದ ಕಡೆಯಿಂದ ಹೇಗೆ ತಲುಪಿಸೋದು, ಅಪಾರ್ಟ್ ಮೆಂಟ್ ಗಳಿಗೆ ಹೇಗೆ ತಲುಪಿಸೋದು ಅಂತ ಮಾತುಕತೆ ನಡೆಯುತ್ತಿದೆ ಎಂದು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English