ಕಾಬೂಲ್: ಭಾರೀ ಶಸ್ತ್ರ ಸಜ್ಜಿತ ಉಗ್ರರ ಗುಂಪು ಗುರುದ್ವಾರದ ಮೇಲೆ ಏಕಾಏಕಿ ದಾಳಿ ನಡೆಸಿ 27 ಮಂದಿಯನ್ನು ಹತ್ಯೆಗೈದಿರುವ ಘಟನೆ ಕಾಬೂಲ್ ನ ಶೋರ್ ಬಜಾರ್ ಪ್ರದೇಶದಲ್ಲಿ ಬುಧವಾರ ನಡೆದಿದೆ ಎಂದು ವರದಿ ತಿಳಿಸಿದೆ. ಸಿಖ್ ಗುರುದ್ವಾರದ ಮೇಲೆ ದಾಳಿ ನಡೆಸಿರುವ ಘಟನೆಯನ್ನು ಭಾರತ ಖಂಡಿಸಿದೆ.
ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಿರುವ ಕೇಂದ್ರ ಸರ್ಕಾರ ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದೆ. ಅಫ್ಘಾನಿಸ್ತಾನದಲ್ಲಿರುವ ಎಲ್ಲಾ ಹಿಂದೂ ಮತ್ತು ಸಿಖ್ ಸಮುದಾಯದ ಕುಟುಂಬಗಳಿಗೆ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ದವಾಗಿದೆ ಎಂದು ತಿಳಿಸಿದೆ.
ಕಾಬೂಲ್ ನಲ್ಲಿರುವ ಸಿಖ್ ಗುರುದ್ವಾರದ ಮೇಲೆ ನಡೆಸಿರುವ ದಾಳಿಯ ಹೊಣೆಯನ್ನು ಐಸಿಸ್ ಹೊತ್ತುಕೊಂಡಿರುವುದಾಗಿ ಎಸ್ ಐಟಿಇ ಇಂಟೆಲಿಜೆನ್ಸ್ ಗ್ರೂಪ್ ತಿಳಿಸಿದೆ. ಈ ದಾಳಿಯ ಹಿಂದೆ ಪಾಕಿಸ್ತಾನದ ಐಎಸ್ ಐ ಕೈವಾಡ ಇದ್ದಿರಬಹುದು ಎಂದು ಭಾರತದ ಗುಪ್ತಚರ ಇಲಾಖೆ ಶಂಕೆ ವ್ಯಕ್ತಪಡಿಸಿದೆ.
Click this button or press Ctrl+G to toggle between Kannada and English