- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ವೆನ್ಲಾಕ್ ಆಸ್ಪತ್ರೆ ಕೋವಿಡ್-19 ಆಸ್ಪತ್ರೆಯನ್ನಾಗಿ ಮಾರ್ಪಾಡು, ಅಲ್ಲಿದ್ದ ಹೋರ ರೋಗಿಗಳು ಖಾಸಗಿ ಆಸ್ಪತ್ರೆಗೆ ವರ್ಗಾವಣೆ

Wenlock Corona [1]ಮಂಗಳೂರು:  ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್-19 ರೋಗಿಗಳ ಆಸ್ಪತ್ರೆಯನ್ನಾಗಿ ಮಾರ್ಪಾಡುಗೊಳಿಸಿ ಇಲ್ಲಿರುವ ಇತರ ಹೋರ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ ನೀಡಿದ್ದಾರೆ.

ಗುರುವಾರ ಪತ್ರಿಕಾಗೋಷ್ಟಿ ನಡೆಸಿ ಈ ಮಾಹಿತಿ ನೀಡಿದ ಉಸ್ತುವಾರಿ ಸಚಿವರು, ವೆನ್ಲಾಕ್ ಆಸ್ಪತ್ರೆಯಲ್ಲಿರುವ ಇತರ ರೋಗಿಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಮತ್ತು ಉಚಿತವಾಗಿಯೇ ಚಿಕಿತ್ಸೆ ನೀಡಲಾಗುವುದು ಎಂದಿದ್ದಾರೆ.

ವೆನ್ಲಾಕ್ ಆಸ್ಪತ್ರೆಯ 250 ಹಾಸಿಗೆಗಳ ಕಟ್ಟಡವನ್ನು ಸಂಪೂರ್ಣವಾಗಿ ಕೋವಿಡ್-19 ಪಾಸಿಟಿವ್ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲಾಗುವುದು. ಆಸ್ಪತ್ರೆಯ 20 ಹಾಸಿಗೆಯುಳ್ಳ ಆಯುಷ್ ಕಟ್ಟಡದಲ್ಲಿ ಶಂಕಿತ ರೋಗಿಗಳಿಗೆ ಮೀಸಲಿಡಲಾಗುವುದು. ಖಾಸಗಿ ಆಸ್ಪತ್ರೆ ಯಲ್ಲಿರುವ ಕೊರೊನಾ ಶಂಕಿತನ್ನೂ ವೆನ್ಲಾಕ್ ಗೆ ದಾಖಲು ಮಾಡಲಾಗುವುದು ಎಂದರು.

ಈಗಾಗಲೇ ವೆನ್ಲಾಕ್ ನಲ್ಲಿ ದಾಖಲಾಗಿರುವ ಇತರ 218 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗುವುದು. ಬಡ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಇದರೊಂದಿಗೆ ಪ್ರತೀ ಮೆಡಿಕಲ್ ಕಾಲೇಜುನಲ್ಲಿ 20 ಹಾಸಿಗೆಗಳ ಐಸೋಲೇಷನ್ ವಾರ್ಡ್ ನಿರ್ಮಾಣ ಮಾಡಲು ವ್ಯವಸ್ಥೆ ಮಾಡಲಾಗಿ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಭಾಗಿಯಾಗಿದ್ದರು.