ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಸ್ಥಗಿತ : ಕೋಟ ಶ್ರೀನಿವಾಸ ಪೂಜಾರಿ

12:18 AM, Saturday, March 28th, 2020
Share
1 Star2 Stars3 Stars4 Stars5 Stars
(No Ratings Yet)
Loading...

Kota ಮಂಗಳೂರು : . ದ.ಕ. ಜಿಲ್ಲೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ.  ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವು ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 7 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ದ.ಕ. ಜಿಲ್ಲೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಸಂಪೂರ್ಣವಾಗಿ ಸಾರ್ವಜನಿಕರ ಓಡಾಟ ನಿರ್ಬಂದಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಕರಣಗಳು ದಾಖಲಾಗಬಾರದೆನ್ನುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ದ.ಕ. ಜಿಲ್ಲೆಯಲ್ಲಿ ಜನರ ಹಿತದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಜನತೆ ಸಹಕಾರ ನೀಡಬೇಕೆಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ. ಪ್ರತಿಯೊಬ್ಬರೂ ಮನೆಯೊಳಗೆ ಕೂತು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English