ಮಾರ್ಚ್ 29 ಮತ್ತು ಮಾರ್ಚ್ 30; ಹಾಲು ಉತ್ಪಾದಕರಿಂದ ಹಾಲು ಖರೀದಿ ಇಲ್ಲ: ದಕ್ಷಿಣ ಕನ್ನಡ ಹಾಲು ಒಕ್ಕೂಟ

5:31 PM, Saturday, March 28th, 2020
Share
1 Star2 Stars3 Stars4 Stars5 Stars
(No Ratings Yet)
Loading...

milk ಮಂಗಳೂರು : ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಂದಿನಿ ಹಾಲಿನ ಬೂತ್ ಗಳು ಗ್ರಾಹಕರಿಗೆ ಸೇವೆ ನೀಡಲು ಸಾಧ್ಯವಾಗದೇ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಸಂಪೂರ್ಣವಾಗಿ ಸ್ಥಗಿತಗೊಂಡಿರುತ್ತದೆ.

ಈ ಕಾರಣದಿಂದ ಪ್ರಸ್ತುತ ಪರಿಸ್ಥಿತಿಯನ್ನು ಸರಿದೂಗಿಸುವ ಅನಿವಾರ್ಯತೆಯಿಂದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಾರ್ಚ್ 29 ಮತ್ತು ಮಾರ್ಚ್ 30 ರಂದು ಬೆಳಿಗ್ಗೆ ಹಾಗೂ ಸಾಯಂಕಾಲದ ಎರಡೂ ಸರದಿಗಳಲ್ಲಿ ಉಭಯ ಜಿಲ್ಲೆಗಳ ಹಾಲು ಉತ್ಪಾದಕರಿಂದ ಹಾಲು ಖರೀದಿಸುವುದನ್ನು ಸ‍್ಥಗಿತಗೊಳಿಸಿದೆ. ಆದರೆ ಈ ಸಂದರ್ಭದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ.

ಮಾರ್ಚ್ 31ರ ಬೆಳಗ್ಗಿನ ಸರದಿಯಿಂದ ಗುಣಮಟ್ಟದ ಹಾಲು ಸಂಗ್ರಹಣೆ ಪುನರಾರಂಭಗೊಳ್ಳಲಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಹೈನು ಬಾಂಧವರು ಒಕ್ಕೂಟದ ಈ ನಿರ್ಧಾರವನ್ನು ಬೆಂಬಲಿಸುವ ಮೂಲಕ ಸಹಕರಿಸಬೇಕು ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ರವಿರಾಜ ಹೆಗ್ಡೆ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English