ಉಡುಪಿ : ಮಾರ್ಚ್ 29ರ ರವಿವಾರದಿಂದ ಜಿಲ್ಲೆಯಾದ್ಯಂತ ಬೆಳಿಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಮಾತ್ರವೇ ದಿನಬಳಕೆಯ ದಿನಸಿ ಸಾಮಗ್ರಿಗಳ ಅಂಗಡಿಗಳು ಕಾರ್ಯಾಚರಿಸಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತ ನಿಗದಿಪಡಿಸಿರುವ ಈ ಅವಧಿಯಲ್ಲಿ ಮಾತ್ರವೇ ಗ್ರಾಹಕರು ತಮಗೆ ಅಗತ್ಯವಿರುವ ದಿನಸಿ ಸಾಮಗ್ರಿಗಳು, ತರಕಾರಿ ಹಣ್ಣು, ಹಾಲು, ಮಾಂಸ, ಮೀನು ಮುಂತಾದ ಅವಶ್ಯಕ ವಸ್ತುಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಮತ್ತು ಖರೀದಿ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English