ಉಡುಪಿ: ಜಿಲ್ಲೆಯಲ್ಲಿ ಮೊದಲ ಕೋವಿಡ್ 19 ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾದ ನಾಲ್ಕು ದಿನಗಳ ಬಳಿಕ ಇಂದು ಮತ್ತೆ ಎರಡು ಮಂದಿಯಲ್ಲಿ ಈ ಸೋಂಕು ಪಾಸಿಟಿವ್ ವರದಿ ಬಂದಿದೆ.
ದಕ್ಷಿಣ ಕನ್ನಡದಲ್ಲಿ ಕೋವಿಡ್ 19 ಸೋಂಕು ಪೀಡಿತರ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಉಡುಪಿಯಲ್ಲಿ ಮಾತ್ರ ಈ ಮಾಹಾಮಾರಿ ನಿಯಂತ್ರಣದಲ್ಲಿತ್ತು. ಆದರೆ ಇಂದು ಮತ್ತೆ ಎರಡು ಪ್ರಕರಣಗಳು ಪತ್ತೆಯಾಗಿರುವುದು ಸಹಜವಾಗಿಯೇ ಜಿಲ್ಲೆಯ ಜನರ ಆತಂಕವನ್ನು ಹೆಚ್ಚು ಮಾಡಿದೆ.
ಒಟ್ಟು ತಪಾಸಣೆ 1,992 ಮಂದಿ. 14+28 ದಿನಗಳ ಮನೆ ನಿಗಾ ಪೂರೈಸಿದವರು 1,055. ಆಸ್ಪತ್ರೆಯ ಕ್ವಾರಂಟೈನಿಗೆ ದಾಖಲಾದ 970.
ಇನ್ನು ಜಿಲ್ಲಾಡಳಿತವು ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಲು ಮಾರ್ಚ್ 29ರಿಂದ ನಿರ್ಧರಿಸಿದೆ. ಈ ಪ್ರಕಾರವಾಗಿ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 7 ಗಂಟೆಯಿಂದ 11 ಗಂಟೆಗಳರೆಗೆ ಮಾತ್ರವೇ ಅವಕಾಶ ನೀಡಲಾಗಿದೆ. ಮೆಡಿಕಲ್, ಚಿಕಿತ್ಸಾಲಯಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳು ಈ ನಿರ್ಧಿಷ್ಟ ಸಮಯದಲ್ಲಿ ಮಾತ್ರವೇ ತೆರೆದಿರಬೇಕೆಂಬ ಕಟ್ಟುನಿಟ್ಟಿನ ಆದೇಶವನ್ನು ಜಿಲ್ಲಾಧಿಕಾರಿಯವರು ಮಾಡಿದ್ದಾರೆ.
ಇಷ್ಟು ಮಾತ್ರವಲ್ಲದೇ ಜಿಲ್ಲೆಯ ಎಲ್ಲಾ ಗಡಿ ಭಾಗಗಳನ್ನು ಮುಚ್ಚಲಾಗಿದ್ದು ತುರ್ತು ಸೇವಾ ಸಂಚಾರವನ್ನು ಹೊರತುಪಡಿಸಿ ಜಿಲ್ಲೆಯಿಂದ ಹೊರಗೆ ಹೋಗುವ ಮತ್ತು ಒಳಗೆ ಬರಲು ಯಾರಿಗೂ ಅವಕಾಶ ಇಲ್ಲದಂತಾಗಿದೆ.
Click this button or press Ctrl+G to toggle between Kannada and English