ಕುಮಾರಧಾರ ನದಿಯಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆಯ ಪತಿಯ ಶವ

10:54 PM, Monday, March 30th, 2020
Share
1 Star2 Stars3 Stars4 Stars5 Stars
(No Ratings Yet)
Loading...

Kulkundaಸುಬ್ರಹ್ಮಣ್ಯ : ಕುಮಾರಧಾರ ನದಿಯಲ್ಲಿ ಶವವೊಂದು  ಸೋಮವಾರ ತೇಲುತ್ತಿರುವುದು ಕಂಡುಬಂದಿದ್ದು ಈ ಕುರಿತಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತರನ್ನು ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆಯ ಪತಿ ಬಾಬು ಕುಲ್ಕುಂದ ಎಂದು ಗುರುತಿಸಲಾಗಿದೆ.

ಸ್ಥಳ್ಕಕೆ ಆಗಮಿಸಿದ ಸುಬ್ರಹ್ಮಣ್ಯ ಪೊಲೀಸರು ಶವವನ್ನು ಮೇಲಕ್ಕೆ ಎತ್ತಿದ್ದು ಮೃತರು ಗ್ರಾ.ಪಂ. ಸದಸ್ಯೆಯ ಪತಿ ಬಾಬು ಕುಲ್ಕುಂದ ಎಂದು ತಿಳಿದು ಬಂದಿದೆ.

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು ಎರಡು ದಿನಗಳ ಹಿಂದೆಯೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಜಾರಿ ನದಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English