ಕೊರೋನಾ ಮಹಾಮಾರಿ ಜಾಗತಿಕವಾಗಿ ಬಲಿ ಪಡೆದದ್ದು 39, 800 ಮಂದಿ ಅಮಾಯಕರನ್ನು

7:17 PM, Tuesday, March 31st, 2020
Share
1 Star2 Stars3 Stars4 Stars5 Stars
(No Ratings Yet)
Loading...

corona worldನವದೆಹಲಿ: ಚೀನಾ ದಿಂದ ಉಗಮವಾದ ಮಹಾಮಾರಿ ಕೊರೋನಾ ಇದೀಗ ಜಗತ್ತನ್ನೇ ತಲ್ಲಣಗೊಳಿಸಿದ್ದು ಸೋಂಕಿತರ ಸಂಖ್ಯೆ 8 ಲಕ್ಷ ದಾಟಿದ್ದು ಅದಾಗಲೇ 39, 800 ಮಂದಿ ಬಲಿಯಾಗಿದ್ದಾರೆ.

ಅಮೆರಿಕಾ, ಇಟಲಿಯಲ್ಲಿ ಸೋಂಕಿತರ ಸಂಖ್ಯೆ ಲಕ್ಷ ದಾಟಿದ್ದರೆ ಸ್ಪೇನ್ ಸನಿಹದಲ್ಲಿದೆ. ಅಮೆರಿಕದಲ್ಲಿ 1,64,400 ಮಂದಿ ಸೋಂಕಿನಿಂದ ಬಳಲುತ್ತಿದ್ದು 3,173 ಮಂದಿ ಮೃತಪಟ್ಟಿದ್ದಾರೆ. ಇಟಲಿಯಲ್ಲಿ 1,02,000 ಸೋಂಕಿತರಿದ್ದು ಸಾವಿನ ಸಂಖ್ಯೆ ಮಾತ್ರ 11 ಸಾವಿರ ಗಡಿ ದಾಟಿದೆ.

ಇನ್ನು ಸ್ಪೇನ್ ನಲ್ಲೂ ಸಾವಿನ ಸಂಖ್ಯೆ ಏರಿಕೆಯಾಗುತ್ತದೆ. ಇಂದು ಒಂದೇ ದಿನ 473 ಮಂದಿ ಮೃತಪಟ್ಟಿದ್ದು 8,189 ಮಂದಿ ಬಲಿಯಾಗಿದ್ದಾರೆ. ಇನ್ನು 95 ಸಾವಿರ ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಮಂಗಳವಾರ ಕೇರಳ, ಮಧ್ಯಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ಮತ್ತೆ ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಇನ್ನು 1400 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English