ಉಡುಪಿ : ಹೋಮ್ ಕ್ವಾರಂಟೈನ್ ಉಲ್ಲಂಘಿಸಿದ್ದಕ್ಕಾಗಿ ಕಾಪು ಮೂಲದ ವ್ಯಕ್ತಿಗೆ ಆತನ ಸಂಪರ್ಕಕ್ಕೆ ಬಂದ ಎಲ್ಲ ರೋಗಿಗಳ ವೆಚ್ಚ ಆತನೇ ಭರಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ.
ಅವರು ಗುರುವಾರ ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದೇಶದಿಂದ ಬಂದು ಹೋಮ್ ಕ್ವಾರಂಟೈನ್ ಆದೇಶವನ್ನು ಉಲ್ಲಂಘಿಸಿದ್ದು, ಮನೆಯಲ್ಲಿ ಇರಬೇಕಾದ ವ್ಯಕ್ತಿ ಎಲ್ಲರ ಜೊತೆಯಲ್ಲಿ ಸೇರಿ ಕ್ರಿಕೆಟ್ ಆಡಿದ್ದಲ್ಲದೆ ಆತ ನಿಯಮ ಉಲ್ಲಂಘನೆ ಮಾಡಿ ಎಲ್ಲ ಕಡೆ ಓಡಾಡಿದ್ದಾನೆ ಆದ್ದರಿಂದ ಅವನ ಸಂಪರ್ಕಕ್ಕೆ ಬಂದ ಎಲ್ಲಾ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಬೇಕಾಗಿದೆ.ಅದಕ್ಕೆ ತಗಲುವ ಎಲ್ಲಾ ವೆಚ್ಚವನ್ನು ಆತನಿಂದನೆ ವಸೂಲಿ ಮಾಡಲಾಗುವುದು ಎಂದರು.
ಅಲ್ಲದೆ ಅಂತಹ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಕೇಸು ದಾಖಲಿಸುತ್ತೇವೆ ಉದ್ಧಟತನ ತೋರಿದ ಎಲ್ಲಾ ಪೇಷಂಟ್ ಪಾರ್ಟಿಯಿಂದ ವೆಚ್ಚವನ್ನು ವಸೂಲಿ ಮಾಡುತ್ತೇವೆ’ ಕಾನೂನು ಉಲ್ಲಂಘಿಸಿದವರಿಗೆ ಎರಡು ವರ್ಷ ಜೈಲುವಾಸ ವಿಧಿಸುವ ಅವಕಾಶ ಇದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಎಂಟು ಮಂದಿಯ ಮೇಲೆ ಪ್ರಕರಣ ದಾಖಲಿಸಿದ್ದೇವೆ ಎಂದರು.
Click this button or press Ctrl+G to toggle between Kannada and English