- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರು : ಕೊರೋನಾ ಅಪ್ ಡೇಟ್ ನೀಡದ ಜಿಲ್ಲಾಡಳಿತ

corona [1]ಮಂಗಳೂರು  : ಕೋವಿಡ್‌- 19 ದೃಢಪಟ್ಟು ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಯಾವುದೇ ರೀತಿಯ ಮಾಹಿತಿ ನೀಡುತ್ತಿಲ್ಲ. ಜಿಲ್ಲಾಡಳಿತದಿಂದ ಬಿಡುಗಡೆಗೊಳ್ಳುವ ಹೆಲ್ತ್‌ ಬುಲೆಟಿನ್‌ನಲ್ಲಿ ಒಂದು ಬಾರಿಯಷ್ಟೇ ಸೋಂಕಿತರ ಆರೋಗ್ಯ ಸುಧಾರಿಸುತ್ತಿದೆ ಎಂದು ಮಾಹಿತಿ ನೀಡಲಾಗಿತ್ತು.

ಈ ನಡುವೆ, ಕೋವಿಡ್‌- 19 ಪಾಸಿಟಿವ್‌ ಕಂಡುಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ತಿಂಗಳ ಶಿಶುವಿನ ಆರೋಗ್ಯ ಸುಧಾರಿಸುತ್ತಿರುವುದಾಗಿ ಮಗುವಿನ ಸಂಬಂಧಿಕರು ಹೇಳಿಕೊಂಡಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಜಿಪನಡುವಿನ 10 ತಿಂಗಳ ಶಿಶುವಿನಲ್ಲಿ ಮಾ. 27ರಂದು ಕೋವಿಡ್‌- 19 ಪತ್ತೆಯಾಗಿತ್ತು. ಶಿಶುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿಶುವಿನ ಆರೋಗ್ಯದಲ್ಲಿ ಚೇತರಿಕೆ ಇದೆ ಎನ್ನಲಾಗುತ್ತಿದೆ.

ಜಿಲ್ಲಾದ್ಯಂತ ಸೆಕ್ಷನ್‌ 144ನ್ನು ಮುಂದು ವರಿಸಲಾಗಿದೆ. ಖಾಸಗಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ನಿಷೇಧಾಜ್ಞೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಜಿಲ್ಲೆಗೆ 52 ಫ್ಲೈಯಿಂಗ್  ಸ್ಕ್ವಾಡ್‌ಗಳನ್ನು ರಚನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಅವರು ತಿಳಿಸಿದ್ದಾರೆ.