- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ: ಸಚಿವ ಕೋಟಾ

ration [1]ಮಂಗಳೂರು  : ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡುದಾರರಿಗೆ ವಿತರಣೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ ಬಿಡುಗಡೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಪಡಿತರದಲ್ಲಿ ಕುಚ್ಚಲಕ್ಕಿ ನೀಡಬೇಕೆಂದು ವ್ಯಾಪಕ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಸರಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಇದೀಗ ಲಭ್ಯವಿರುವ 20000 ಕ್ವಿಂಟಾಲ್ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ. ಮುಂದಿನ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

61302 ಕಾರ್ಡುಗಳಿಗೆ ಪಡಿತರ ವಿತರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಣೆ ಏಪ್ರಿಲ್ 2 ರಂದು ಪ್ರಾರಂಭವಾಗಿದ್ದು, ಎರಡು ದಿನಗಳಲ್ಲಿ 61302 ಕಾರ್ಡುದಾರರಿಗೆ ಅಕ್ಕಿ ವಿತರಣೆ ಮಾಡಲಾಗಿದೆ.

ಕರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಪ್ರಿಲ್ ಮತ್ತು ಮೇ ತಿಂಗಳ ಪಡಿತರ ಒಟ್ಟಿಗೇ ನೀಡಲಾಗುತ್ತಿದೆ.

ಬಿಪಿಎಲ್ ಕಾಡ್೯ ನವರಿಗೆ ಪ್ರತೀ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ, ಪ್ರತೀ ಅಂತ್ಯೋದಯ ಕಾಡ್೯ಗೆ 70 ಕೆ.ಜಿ. ಹಾಗೂ ಪ್ರತೀ ಏಪಿಎಲ್ ಕಾಡ್೯ಗೆ 20 ಕೆ.ಜಿ.ಯಂತೆ ಅಕ್ಕಿ ವಿತರಿಸಲಾಗುತ್ತಿದೆ.

ಏಪ್ರಿಲ್ 2 ಮತ್ತು 3 ರಂದು ದ.ಕ. ಜಿಲ್ಲೆಯಲ್ಲಿ 61302 ಕಾಡ್೯ಗಳಿಗೆ ಸುಮಾರು 27000 ಕ್ವಿಂಟಾಲ್ ಅಕ್ಕಿ ವಿತರಿಸಲಾಗಿದೆ. ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಸಾಮಾಜಿಕ ಅಂತರ ಕಾಪಾಡಲಾಗುತ್ತಿದೆ ಎಂದು ಆಹಾರ ಇಲಾಖೆ ಜಂಟೀ ನಿರ್ದೇಶಕರು ತಿಳಿಸಿದ್ದಾರೆ.