ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕ ಮೂಲದವರ ಪೈಕಿ 13 ಮಂದಿಗೆ ಕೋವಿಡ್ 19 ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಕೊರೋನಾ ವೈರಸ್ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡುವ ಜವಾಬ್ದಾರಿ ಹೊತ್ತ ಬಳಿಕ ಮೊದಲ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಸುರೇಶ್ ಕುಮಾರ್ ಅವರು, ರಾಜ್ಯದಿಂದ ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯ ಧಾರ್ಮಿಕ ಸಭೆಗೆ ಪಾಲ್ಗೊಳ್ಳಲು ತೆರಳಿದ್ದವರ ಪೈಕಿ 13 ಮಂದಿಗೆ ಕೊರೋನಾ ವೈರಸ್ ತಗುಲಿದೆ. ಈ ವರೆಗೂ ಸಭೆಗೆ ಹಾಜರಾಗಿದ್ದ 187 ಮಂದಿಯ ವೈದ್ಯಕೀಯ ತಪಾಸಣೆ ವರದಿ ನೆಗೆಟಿವ್ ಬಂದಿದೆ. ಇನ್ನೂ 88 ಮಂದಿಯ ವರದಿ ಬಂದಿಲ್ಲ ಎಂದು ಹೇಳಿದರು.
Click this button or press Ctrl+G to toggle between Kannada and English