ರಾಜ್ಯದಲ್ಲಿ 151 ಜನರಿಗೆ ಕೊರೋನಾ ಸೋಂಕು, ನಾಲ್ವರು ಮೃತ, 12 ಡಿಸ್ಚಾರ್ಜ್

10:46 PM, Sunday, April 5th, 2020
Share
1 Star2 Stars3 Stars4 Stars5 Stars
(No Ratings Yet)
Loading...

corona ಬೆಂಗಳೂರು:  ರಾಜ್ಯ ಸರ್ಕಾರ ಭಾನುವಾರ  ಸಂಜೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಒಟ್ಟು 151 ಜನರಿಗೆ ಈ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 12 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೋನಾ ಸೋಂಕು ಪೀಡಿತ 135 ವ್ಯಕ್ತಿಗಳಲ್ಲಿ 132 ಮಂದಿ ಗೊತ್ತುಪಡಿಸಿದ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಮೂವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ. ನಿನ್ನೆ ಸಂಜೆಯಿಂದ ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಏಳು ಹೊಸ ಕೋವಿಡ್-19 ಸೋಂಕಿತರು ಪತ್ತೆಯಾಗಿದ್ದಾರೆ.

ಮಾರ್ಚ್ 22 ರಂದು ದುಬೈಗೆ ಪ್ರಯಾಣ ಮಾಡಿ ಭಾರತಕ್ಕೆ ಆಗಮಿಸಿರುವ ಬೆಂಗಳೂರಿನ 68 ವರ್ಷದ ಪುರುಷ ಹಾಗೂ ಮಹಿಳೆಯರೊಬ್ಬರು ಸೋಂಕಿಗೆ ತುತ್ತಾಗಿದ್ದು, ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಕಾಶ್ ಆಸ್ಪತ್ರೆಯಲ್ಲಿ ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ.

ದೆಹಲಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಮಾರ್ಚ್ 20 ರಂದು ಹಿಂತಿರುಗಿರುವ ಬೆಳಗಾವಿ ಜಿಲ್ಲೆಯ ರಾಯ್ ಭಾಗ್ ನ 36 ವರ್ಷದ ಮಹಿಳೆಯೊಬ್ಬರಲ್ಲಿ ಸೋಂಕು ಪತ್ತೆಯಾಗಿದ್ದು, ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ.

ರಾಜ್ಯದಲ್ಲಿ ಒಟ್ಟು ಪತ್ತೆ ಮಾಡಲಾಗಿರುವ 151 ಪ್ರಕರಣಗಳಲ್ಲಿ 8 ಪ್ರಕರಣಗಳು ಕೇರಳದವರಾಗಿದ್ದು, ಅವರು ಕರ್ನಾಟಕದ ವಿಮಾನ ನಿಲ್ದಾಣಗಳಿಗೆ ಆಗಮಿಸಿ, ಇಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ದಿನ ಮಂಗಳೂರಿನಲ್ಲಿ 86 ಜನರನ್ನು  ತಪಾಸಣೆ ಮಾಡಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English