ಬಂಟ್ವಾಳ : ಕೋವಿಡ್19 ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖ ವಾಗಿ, ಇಂದು ಆಸ್ಪತ್ರೆ ಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ.
ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿರುತ್ತದೆ. ಇವರೂ ಕೂಡಾ ಇಂದು ಡಿಸ್ಚಾಜ್೯ ಆಗಿರುತ್ತಾರೆ. ಇದುವರೆಗೆ ದ.ಕ. ಜಿಲ್ಲೆಯ 12 ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ, ಬಿಡುಗಡೆಗೊಂಡಿದ್ದು, ಶೇಕಡಾ 50 ಪ್ರಗತಿಯಾಗಿದೆ.
ಈ ವಾರ ಪೂರ್ತಿ ಅಂದರೆ ಏಪ್ರಿಲ್ 5 ರಿಂದ 11 ರವರೆಗೆ ದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿರುವುದಿಲ್ಲ. ಇದು ಜಿಲ್ಲೆಯ ಮಟ್ಟಿಗೆ ಆಶಾದಾಯಕ ಸಂಗತಿ.
10 ತಿಂಗಳ ಮಗುವಿನ ಕರೋನಾ ಪ್ರಕರಣವು, ರಾಜ್ಯದಲ್ಲೇ ವಿಶಿಷ್ಟ ಪ್ರಕರಣವಾಗಿತ್ತು. ಕೇವಲ ಎದೆ ಹಾಲು ಕುಡಿಯುವ ಪುಟ್ಟ ಕಂದನಿಗೆ ಕೊರೊನಾ ಚಿಕಿತ್ಸೆ ನೀಡುವುದು ವೈದ್ಯರಿಗೂ ಸವಾಲಾಗಿತ್ತು. ಪುಟ್ಟ ಮಗುವಿನ ಐಸೋಲೇಶನ್ ನೊಂದಿಗೆ, ಚಿಕಿತ್ಸೆ ನೀಡುವುದು ಬಹಳ ಸೂಕ್ಷ್ಮವಾಗಿತ್ತು. ವೈದ್ಯರು ಈ ಸವಾಲನ್ನು ಬಹಳ ನಾಜೂಕಾಗಿ ನಿರ್ವಹಿಸಿದ್ದು, ವೆನ್ ಲಾಕ್ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ಗುಣಮಟ್ಟದ ಚಿಕಿತ್ಸೆ ನೀಡಿ, ಮಗುವನ್ನು ಗುಣಮುಖ ಗೊಳಿಸಿದ್ದಾರೆ. ಇದು ಜಿಲ್ಲೆಯ ವೈದ್ಯಕೀಯ ಕ್ಷೇತ್ರಕ್ಕೂ ಖ್ಯಾತಿ ತಂದಿದೆ.
ಕೊರೊನಾ ದೃಢಪಟ್ಟ ನಂತರ ಇಡೀ ಸಜೀಪನಡು ಗ್ರಾಮವನ್ನು ಸಂಪೂರ್ಣ ಸೀಲ್ ಮಾಡಲಾಗಿತ್ತು. ಗ್ರಾಮಸ್ಥರು ಬಹಳ ಉತ್ತಮ ಸಹಕಾರ ನೀಡಿದ್ದಾರೆ. ಈ ಅವಧಿಯಲ್ಲಿ ಜಿಲ್ಲಾಡಳಿತ ಗ್ರಾಮಸ್ಥರಿಗೆ ಎಲ್ಲಾ ಅಗತ್ಯ ಸಾಮಾಗ್ರಿಗಳು, ಸೌಲಭ್ಯಗಳನ್ನು ಮನೆ ಬಾಗಿಲಿಗೆ ಒದಗಿಸಿದೆ.
Click this button or press Ctrl+G to toggle between Kannada and English
April 12th, 2020 at 08:31:45
ವೈದ್ಯರಿಗೆ ದನ್ಯವಾದಗಳು