ಮಂಗಳೂರು: ನಗರದ ಆರ್ಯಸಮಾಜ ರಸ್ತೆಯಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ವಿದ್ಯಾರ್ಥಿಯೊಬ್ಬ ಗೆಳೆಯ ನನ್ನು ಸೂಟ್ ಕೇಸಿನಲ್ಲಿ ತುಂಬಿಸಿ ತನ್ನ ರೂಮಿಗೆ ತಂದ ಘಟನೆ ಭಾನುವಾರ ನಡೆದಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ನಗರದ ಆರ್ಯಸಮಾಜ ರಸ್ತೆಯಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ವಾಸ್ತವ್ಯ ಇರುವವರು ಹೊರತುಪಡಿಸಿ ಇತರರಿಗೆ ಪ್ರವೇಶ ನಿರಾಕರಿಸಲಾಗಿತ್ತು. ವಿದ್ಯಾರ್ಥಿ ಮಾತ್ರ ತನ್ನ ಗೆಳೆಯನನ್ನು ರೂಮಿಗೆ ಕರೆತರುತ್ತೇನೆ ಎಂದು ಚಾಲೆಂಜ್ ಮಾಡಿದ್ದ.
ಅಪಾರ್ಟ್ ಮೆಂಟ್ ನವರು ಬಿಡದೆ ಇದ್ದರು ಯುವಕ ರವಿವಾರ ಬೆಳಗ್ಗೆ ತನ್ನ ಗೆಳೆಯನನ್ನು ಸೂಟ್ ಕೇಸಿನಲ್ಲಿ ತುಂಬಿಸಿ ರೂಮಿಗೆ ಕೊಂಡೊಯ್ಯುವ ಪ್ರಯತ್ನ ಮಾಡಿದ್ದಾನೆ. ಈ ವೇಳೆ ಸೂಟ್ ಕೇಸ್ ನಲ್ಲಿ ಸಂಚಲನ ಕಂಡು ಬಂದಿದ್ದು, ವಸತಿ ಸಮುಚ್ಚಯದಲ್ಲಿರುವ ಇತರರ ಗಮನಕ್ಕೆ ಬಂದಿದೆ. ಕೂಡಲೇ ಎಲ್ಲರೂ ಸೇರಿ ಸೂಟ್ ಕೇಸ್ ತೆರೆಯುವಂತೆ ಒತ್ತಾಯಿಸಿದ್ದಾರೆ. ಸಂದಿಗ್ಧ ಸ್ಥಿತಿಗೆ ಸಿಲುಕಿದ ಯುವಕ ಸೂಟ್ ಕೇಸ್ ತೆರೆಯುವಾಗ ಸತ್ಯಾಂಶ ಬಹಿರಂಗವಾಗಿದೆ.
ಕದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಇಬ್ಬರನ್ನೂ ಠಾಣೆಗೆ ಕರೆಸಿದ್ದಾರೆ. ಬಳಿಕ ಮನೆಮಂದಿಯನ್ನು ಕರೆಸಿ ಯುವಕರಿಗೆ ಬುದ್ದಿವಾದ ಹೇಳಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
Click this button or press Ctrl+G to toggle between Kannada and English