ಮಂಗಳೂರು : ಲಾಕ್ ಡೌನ್ ಇರುವುದರಿಂದ ರಾಜ್ಯದಲ್ಲಿ ವಿದ್ಯುತ್ ಬಿಲ್ ಪಾವತಿಸುವುದನ್ನು ತಾತ್ಕಾಲಿಕವಾಗಿ ಮೂರು ತಿಂಗಳು ಮುಂದೂಡಲು ಸರಕಾರ ಮತ್ತು ವಿದ್ಯುತ್ ನಿಯಂತ್ರಣ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಅರ್ಜಿಯೊಂದನ್ನು ವಜಾಗೊಳಿಸಿರುವ ಹೈಕೋರ್ಟ್ ಅರ್ಜಿದಾರರಿಗೆ 50 ಸಾವಿರ ರೂಪಾಯಿಗಳ ದಂಡ ವಿಧಿಸಿದೆ. ಇದು ಅಘಾತಕಾರಿಯಾದ ತೀರ್ಪು ಎಂದು ಸಿಪಿಐ(ಎಂ) ದ.ಕ. ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ತಿಳಿಸಿದ್ದಾರೆ.
ಅರ್ಜಿದಾರರು ವಿನಾಯಿತಿ ಏನೂ ಕೇಳಿಲ್ಲ. ಆದರೆ ತಾತ್ಕಾಲಿಕವಾಗಿ ಮೂರು ತಿಂಗಳು ಮುಂದೂಡಲು ನಿರ್ದೇಶನ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದಾರೆ. ಇದು ನೊಂದು ಕಷ್ಟದಲ್ಲಿರುವ ವಿದ್ಯುತ್ ಬಳಕೆದಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಜ್ಯ ಸರಕಾರವು ವಿದ್ಯುತ್ ಬಿಲ್ ಪಾವತಿಸುವುದನ್ನು ತಾತ್ಕಾಲಿಕವಾಗಿ ಮೂರು ತಿಂಗಳು ಮುಂದೂಡಿ ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ.
Click this button or press Ctrl+G to toggle between Kannada and English