ಲಾಕ್‌ಡೌನ್ ಆದೇಶ ಉಲ್ಲಂಘಿಸುವವರನ್ನು ಪತ್ತೆ ಹಚ್ಚಲು ಡ್ರೋನ್ ಕ್ಯಾಮರಾ ಬಳಕೆ

1:06 PM, Monday, April 13th, 2020
Share
1 Star2 Stars3 Stars4 Stars5 Stars
(No Ratings Yet)
Loading...

drone cameraಮಂಗಳೂರು:  ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹೊಸ ತಂತ್ರವನ್ನು ಬಳಸಿದ್ದಾರೆ .

ಕೋವಿಡ್-19 ಸೋಂಕು ಹರಡದಂತೆ ಲಾಕ್ ಡೌನ್ ಹೇರಲಾಗಿದ್ದು, ವಿಟ್ಲ, ಬಂಟ್ವಾಳ, ಪುತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರೋನ್ ಕ್ಯಾಮರಾ ಮೂಲಕ ಹದ್ದಿನ ಕಣ್ಣಿಟ್ಟಿದ್ದು, ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಇಲ್ಲಿನ ಗಲ್ಲಿಗಲ್ಲಿಗಳಲ್ಲೂ ಡ್ರೋನ್ ಕ್ಯಾಮೆರಾದ ಮೂಲಕ ಕಣ್ಗಾವಲು ಇರಿಸಲಾಗಿದೆ. ಮೈದಾನ, ಗದ್ಡೆ ಸೇರಿ ಹಲವೆಡೆ ಕ್ರಿಕೆಟ್ ಆಡುವವರ, ಗುಂಪು ಸೇರುವವರ ಪತ್ತೆಗೆ ಬಳಕೆ ಮಾಡಲಾಗುತ್ತಿದೆ. ‘

ಪೊಲೀಸರ ಡ್ರೋನ್ ಕ್ಯಾಮಾರಾ ಕಂಡು ಬೈಕ್ ಸವಾರರು ಅರ್ಧ ದಾರಿಯಿಂದಲೇ ವಾಪಸಾಗುವ ದೃಶ್ಯವೂ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗುಂಪು ಸೇರಿ ಮಾತನಾಡುವ, ಕ್ರಿಕೆಟ್ ಆಡುವ ಯುವಕರೂ ದಿಕ್ಕಾಪಾಲಾಗಿ ಓಡಿದ್ದಾರೆ. ಈ ಮೂಲಕ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡುವ ಜನರನ್ನು ನಿಯಂತ್ರಿಸಲು ಡ್ರೋನ್ ಕ್ಯಾಮೆರಾದ ಬಳಕೆ ಮಾಡಿ ದಕ್ಷಿಣಕನ್ನಡ ಜಿಲ್ಲಾ ಪೋಲಿಸರು ಹೊಸದೊಂದು ಪ್ರಯತ್ನವನ್ನು ಮಾಡಿದ್ದಾರೆ.

drone camera

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English