ಮಂಗಳೂರು : ಕೋರೋನಾ ಪ್ರಕರಣಗಳಲ್ಲಿ ಬೆಂಗಳೂರು, ಮೈಸೂರು ನಂತರ 3 ನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಇದೀಗ 6ನೇ ಸ್ಥಾನಕ್ಕಿಳಿದಿದೆ. ಜಿಲ್ಲೆಯ ಮಟ್ಟಿಗೆ ಇದು ಸಮಾಧಾನಕರ ಸಂಗತಿ. ಆದರೂ, ಇನ್ನೂ ಬಹಳಷ್ಟು ಜಾಗರೂಕರಾಗಿರಬೇಕಿದೆ. ಜಿಲ್ಲೆಯಲ್ಲಿ 12 ಪ್ರಕರಣಗಳಲ್ಲಿ 8 ಮಂದಿ ಗುಣಮುಖರಾಗಿದ್ದಾರೆ.
ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಸೋಮವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ 26 ಮಂದಿಯ ವರದಿಯು ನೆಗೆಟಿವ್ ಆಗಿದೆ. ಇನ್ನೂ 24 ಮಂದಿಯ ವರದಿಗಾಗಿ ಕಾಯಲಾಗುತ್ತಿದೆ. ಜ್ವರದ ಹಿನ್ನೆಲೆಯಲ್ಲಿ 7 ಮಂದಿಯ ಮೇಲೆ ನಿಗಾ ಇಡಲಾಗಿದೆ.
ಸೋಮವಾರ 72 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದೆ. ಇದರೊಂದಿಗೆ ಈವರೆಗೆ 38,937 ಮಂದಿಯ ಸ್ಕ್ರೀನಿಂಗ್ ಮಾಡಿದಂತಾಗಿದೆ. ಸೋಮವಾರ 18 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸೋಮವಾರದವರೆಗೆ 1731 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಇದೀಗ ಯಾರೂ ಕ್ವಾರಂಟೈನ್‌ನಲ್ಲಿಲ್ಲ. ಇಎಸ್‌ಐ ಆಸ್ಪತ್ರೆಯಲ್ಲಿ 24 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ. ಸೋಮವಾರ 28 ದಿನದ ಕ್ವಾರಂಟೈನ್ (ನಿಗಾ) ಅವಧಿಯನ್ನು 4,342 ಮಂದಿ ಪೂರೈಸಿದ್ದಾರೆ.
ಈವರೆಗೆ 480 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆ ಪೈಕಿ 457 ಮಂದಿಯ ವರದಿಯನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 445 ಮಂದಿಯ ವರದಿಯು ನೆಗೆಟಿವ್ ಆಗಿದ್ದರೆ, 12 ಮಂದಿಯ ವರದಿಯು ಪಾಸಿಟಿವ್ ಆಗಿತ್ತು. ಪಾಸಿಟಿವ್‌ಗಳ ಪೈಕಿ ಮಗು ಮತ್ತು ವೃದ್ಧೆಯ ಸಹಿತ 8 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಉಳಿದ 4 ಮಂದಿ ಚೇತರಿಸುತ್ತಿದ್ದಾರೆ.
Click this button or press Ctrl+G to toggle between Kannada and English