ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 19 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಎರಡು ದಿನದ ಹಿಂದೆ ಸಾವನ್ನಪ್ಪಿದ ಬೆಳಗಾವಿ ವೃದ್ಧೆಗೆ ಸೋಂಕು ಇತ್ತು ಎಂದು ಖಚಿತವಾಗಿದೆ.
ಬುಧವಾರ ಬೆಳಿಗ್ಗೆ ಚಿಕ್ಕಬಳ್ಳಾಪುರದ ವ್ಯಕ್ತಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದರು. ಈಗ ಬೆಳಗಾವಿ, ಹಿರೇಬಾಗೆವಾಡಿಯ 80 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದ ಸೋಂಕಿತರ ಸಾವಿನ ಸಂಖ್ಯೆ 12ಕ್ಕೇರಿದೆ.
ವಿಜಯಪುರದಲ್ಲಿ ಮತ್ತೊಂದು ಸೋಂಕು ಪ್ರಕರಣ ದೃಢವಾಗಿದೆ. ಸೋಂಕಿತ ಸಂಖ್ಯೆ 221 ರ ಸಂಪರ್ಕಕ್ಕೆ ಬಂದ 28 ವರ್ಷದ ಮಹಿಳೆಗೆ ಸೋಂಕು ದೃಢವಾಗಿದೆ.
ಇನ್ನೂ ಈ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಕ್ಕೆ ಬಂದಿರುವ 21 ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಇವರ ವರದಿ ಇನ್ನೂ ಬರಬೇಕಾಗಿದೆ.
Click this button or press Ctrl+G to toggle between Kannada and English